More

    ರಾಜ್ಯದಲ್ಲಿ ಮತ್ತೆ ಮಳೆ ಬಿರುಸು, ನಾಳೆ 9 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಬಿರುಸುಗೊಂಡಿದ್ದು, ಗುರುವಾರವೂ ವಿವಿಧ ಭಾಗದಲ್ಲಿ ಮಳೆಯಾಗಿದೆ. ಕರಾವಳಿ, ಮಲೆನಾಡಿನ ಎಲ್ಲ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

    ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಜು.29ರಿಂದ ಆ.1ರವರೆಗೆ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಜು.29 ಮತ್ತು 31ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ತುಮಕೂರು ಮತ್ತು ಚಿತ್ರದುರ್ಗದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ವಾರದಿಂದ ಮಳೆ ಬಿಡುವು ಕೊಟ್ಟಿರುವ ಪರಿಣಾಮ ರಾಜ್ಯದಲ್ಲಿ ಶೇ.48 ಮಳೆ ಕೊರತೆಯಾಗಿದೆ. ಜು.22ರಿಂದ ಜು.28ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 63 ಮಿಮೀ ಮಳೆಯಾಗಬೇಕಿತ್ತು. ಆದರೆ, 33 ಮಿಮೀ ಮಳೆಯಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಸರಾಸರಿ ಶೇ.70 ಮಳೆ ಕುಂಠಿತವಾಗಿದೆ.

    ಯುವತಿ ಹೆಸರಲ್ಲಿ ಮಾಡಬಾರದ್ದು ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಪಿಎಸ್​ಐ ಉದ್ಯೋಗಾಕಾಂಕ್ಷಿ! ಯುವಕರೇ ಈತನ ಟಾರ್ಗೆಟ್​…

    ಮಧುಚಂದ್ರಕ್ಕೆ ಹೋಗಬೇಕಿದ್ದ ನವವಿವಾಹಿತ ಆಸ್ಪತ್ರೆಗೆ… ತಡರಾತ್ರಿ ಕುಸಿದುಬಿದ್ದ ಮನೆಯ ಗೋಡೆ, ಛಾವಣಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts