More

    ರಾಜ್ಯದಲ್ಲಿ ಧಾರಾಕಾರ ಮಳೆ: ಕೆಲವೆಡೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು: ರಾಜ್ಯಾದ್ಯಂತ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಿ ಅಲ್ಲಿನ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

    ಮೈಸೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಒಂದು ದಿನದ ಷರತ್ತುಬದ್ಧ ರಜೆ ಘೋಷಿಸಿ ಮೈಸೂರಿನ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಆದೇಶಿಸಿದ್ದಾರೆ. ಮುಂದಿನ ರಜಾದಿನಗಳಲ್ಲಿ ಒಂದು ದಿನ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸಲಾಗಿದೆ.

    ಮಳೆ ಹಿನ್ನೆಲೆ ಮಂಡ್ಯ ಜಿಲ್ಲಾದ್ಯಂತ ಅಂಗನವಾಡಿ ಹಾಗೂ 1ರಿಂದ 10 ನೇ ತರಗತಿ ಶಾಲೆಗಳಿಗೆ ಜಿಲ್ಲಾಧಿಕಾರಿ ಅಶ್ವಥಿ ರಜೆ ಘೋಷಿಸಿದ್ದಾರೆ. ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೂ ಈ ಆದೇಶ ಅನ್ವಯ.

    ಶಿವಮೊಗ್ಗ ಜಿಲ್ಲೆಯಲ್ಲಿ ಮೇ 19ರಂದು ಭಾರೀ ಮಳೆ ಬೀಳುವ ಹಿನ್ನೆಲೆ ಹವಾಮಾನ ಇಲಾಖೆ ಹೈ ಅಲರ್ಟ್​ ಘೋಷಿಸಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಒಂದು ದಿನದ ಮಟ್ಟಿಗೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ರಜೆ ಘೋಷಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವರುಣನ ಅಬ್ಬರ ಜೋರಾಗಿದ್ದು, ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ರಜೆ ಘೋಷಿಸಿದ್ದಾರೆ.

    PSI ಹುದ್ದೆ ಅಕ್ರಮ: ಮೊದಲ ರಾತ್ರಿಯ ಖುಷಿಯಲ್ಲಿದ್ದವನಿಗೆ ಶಾಕ್ ಕೊಟ್ಟ ಸಿಐಡಿ​! ದೇವಸ್ಥಾನದಲ್ಲೇ ನವವಿವಾಹಿತ ವಶಕ್ಕೆ

    ಮೈಸೂರಲ್ಲಿ ವಿಕೃತ ಕಾಮಿ: ಈತನ ಗಾಳಕ್ಕೆ ಬಿದ್ದ ಯುವತಿಯರ ಪಾಡು ಹೇಳತೀರದು… ಮೊಬೈಲ್​ ನೋಡಿ ಬೆಚ್ಚಿಬಿದ್ದ ಪೊಲೀಸರು

    ಫ್ಯಾಟ್​ ಬರ್ನ್​ ಸರ್ಜರಿ ಪ್ರಾಣಕ್ಕೆ ಕುತ್ತು ತರುತ್ತಾ? ನಟಿ ಚೇತನಾ ಸಾವಿನ ಬೆನ್ನಲ್ಲೇ ಮಹತ್ವದ ವಿಚಾರ ತಿಳಿಸಿದ ವೈದ್ಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts