More

    ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ: ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ

    ಬೆಂಗಳೂರು: ಕರಾವಳಿ, ಮಲೆನಾಡು, ಕೊಡಗು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಣಾಮ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಎಲ್ಲ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ವಿಸ್ತರಿಸಲಾಗಿದೆ.

    ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಶಾಲಾ- ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಶುಕ್ರವಾರವೂ ರಜೆ ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂ.8 ಮತ್ತು 9ರ ವರೆಗೂ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಕುಂದಾಪುರ ಭಾಗದಲ್ಲಿ ನೂರಾರು ಮನೆಗಳು ಜಲಾವೃತಗೊಂಡಿವೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ಭಾಗದಲ್ಲಿ ಸೌಪಣಿರ್ಕಾ, ಚಕ್ರ, ವಾರಾಹಿ, ಕುಬ್ಜಾ ಸಹಿತ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದ್ದು, ತೀರ ಪ್ರದೇಶದ ಗ್ರಾಮಗಳು ಜಲಾವೃತಗೊಂಡಿವೆ. ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಈ ಭಾಗದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ದೋಣಿಗಳಲ್ಲಿ ಸ್ಥಳಾಂತರಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಭೀತಿ ಎದುರಾಗಿದ್ದು, ಜನರಲ್ಲಿ ಆತಂಕ ಮಡುಗಟ್ಟಿದೆ.

    ಉಡುಪಿಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

    ಬಕ್ರೀದ್​ ಹಬ್ಬಕ್ಕೆ ಸರ್ಕಾರದಿಂದ ಮಾರ್ಗಸೂಚಿ: ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts