ರಾತ್ರೋರಾತ್ರಿ ಬಿಡದಿಯಲ್ಲಿ ಕಾಂಗ್ರೆಸ್​ ಮುಖಂಡನ ಭೀಕರ ಕೊಲೆ

rmg congress
Published on

ರಾಮನಗರ: ರಾಜಧಾನಿ ಸಮೀಪದಲ್ಲೇ ಇರುವವ ಬಿಡದಿ ಹೋಬಳಿಯಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡರೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿ ಗಂಡಪ್ಪ ಕೊಲೆಯಾದ ದುರ್ದೈವಿ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಬೈರವನದೊಡ್ಡಿ ಸಮೀಪ ಇರುವ ಅವರದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net