ನಟ ಸಂಚಾರಿ ವಿಜಯ್​ಗೆ ಧಾರವಾಡ ಕಲಾವಿದನ 'ಕಲಾ ಶ್ರದ್ಧಾಂಜಲಿ'

sanchari vijay
Published on

ಧಾರವಾಡ: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅವರ ಭಾವಚಿತ್ರವನ್ನ ರಂಗೋಲಿಯಲ್ಲಿ ಬಿಡಿಸುವ ಮೂಲಕ ಸಂತಾಪ ಸೂಚಿಸಲಾಗಿದೆ.

ಧಾರವಾಡದ ಕೆಲಗೇರಿಯ ಗಾಯತ್ರಿಪುರದ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ನಟ ವಿಜಯ್​ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ವಿಜಯ್​ ಭಾವ ಚಿತ್ರದ ಕೆಳಗೆ ಕಲಾ ಶ್ರದ್ಧಾಂಜಲಿ ಎಂದು ಬರೆದಿದ್ದಾರೆ. ಕರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಜನಸೇವೆಯಲ್ಲಿ ತೊಡಗಿಕೊಂಡಿದ್ದ ವಿಜಯ್‌ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದರು. ಅಪಘಾತಕ್ಕೀಡಾಗಿ ಇಹಲೋಕ ತ್ಯಜಿಸಿದ ಅವರ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಮಂಜುನಾಥ ಹಿರೇಮಠ ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net