

ಬೆಂಗಳೂರು: ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಸಿಟಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವವರಿಗೆ ಸರ್ಕಾರ ಬ್ರೇಕ್ ಹಾಕಿದೆ.
ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಗೊಳಿಸಿ ಮಹತ್ವದ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ರೋಗಿಗಳಿಂದ ಸಿಟಿ ಸ್ಕ್ಯಾನ್ಗೆ ಹೆಚ್ಚು ಹಣ ವಸೂಲಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇನ್ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ವ್ಯವಸ್ಥೆಯಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಚಿವ ಸುಧಾಕರ್ ಜನರಲ್ಲಿ ಮನವಿ ಮಾಡಿದ್ದಾರೆ.