More

    ಬಿಸಿಸಿಐ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಆಯ್ಕೆ

    ಮುಂಬೈ: ಬಿಸಿಸಿಐ(ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಆಯ್ಕೆಯಾದರು.

    ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಂದ ತೆರವಾದ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮುಂಬೈನಲ್ಲಿ ಮಂಗಳವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರೋಜರ್ ಬಿನ್ನಿ ಅವರನ್ನ ಅವಿರೋಧ ಆಯ್ಕೆ ಮಾಡಲಾಯಿತು.

    27 ಟೆಸ್ಟ್ ಮತ್ತು 72 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಬಿನ್ನಿ, ರಾಷ್ಟ್ರೀಯ ಆಯ್ಕೆ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 1983ರ ಏಕದಿನ ವಿಶ್ವಕಪ್‌ ವಿಜೇತ ಭಾರತ ತಂಡದಲ್ಲಿದ್ದ ಬಿನ್ನಿ, ಆ ಟೂರ್ನಿಯಲ್ಲಿ 18 ವಿಕೆಟ್‌ ಪಡೆದು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮಿಂಚಿದ್ದರು.

    ಗಂಗೂಲಿ ಅವರು ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು ಎನ್ನಲಾಗಿತ್ತು. ಆದರೆ ನಂತರದ ವಿದ್ಯಾಮಾನದಲ್ಲಿ ಅವರು ಬೆಂಗಾಲ್ ಕ್ರಿಕೆಟ್​ ಮಂಡಳಿಯ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗಿದೆ.

    ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​

    ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿ… ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಶ್ರೀಗಳು ಕರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts