ರೋಹಿಣಿ ಸಿಂಧೂರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ

rohini sindhuri
Published on

ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿ ಪಾರಂಪರಿಕ ಕಟ್ಟಡವನ್ನು ಪಾರಂಪರಿಕ ಸಂರಕ್ಷಣಾ ಸಮಿತಿ ಅನುಮತಿ ಇಲ್ಲದೆ ನವೀಕರಿಸಿದ ಆರೋಪವನ್ನು ಸಿಂಧೂರಿ ಎದುರಿಸುತ್ತಿದ್ದು, ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದೆ.

ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಪಾರಂಪರಿಕ ಕಟ್ಟಡವಾಗಿದೆ. ಅಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೊಳ್ಳಬೇಕಾದರೆ ಪಾರಂಪರಿಕ ಸಂರಕ್ಷಣಾ ಸಮಿತಿ ಅನುಮತಿ ಕಡ್ಡಾಯ. ಆದರೆ, ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭ ಈ ನಿಯಮಗಳನ್ನು ಗಾಳಿಗೆ ತೂರಿ ಜಲಸನ್ನಿಧಿ ನಿವಾಸವನ್ನು ನವೀಕರಿಸಿದ್ದಾರೆ. ಅಲ್ಲದೆ, ಜಲ ಸನ್ನಿಧಿಯಲ್ಲಿ ನೆಲಹಾಸಿಗೆ ವಿಟ್ರಿಫೈಡ್ ಟೈಲ್ಸ್ ಅಳವಡಿಕೆ ಮಾಡಲಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸಾ.ರಾ. ಮಹೇಶ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. ಇದೇ ರೀತಿ ಜಲಸನ್ನಿಧಿಯ ಈಜುಕೊಳವನ್ನು ನಿಯಮಬಾಹಿರವಾಗಿ ನಿರ್ವಿುಸಿದ ಆರೋಪವನ್ನು ರೋಹಿಣಿ ಸಿಂಧೂರಿ ಎದುರಿಸುತ್ತಿದ್ದು, ಈ ಬಗ್ಗೆ ಕೂಡ ತನಿಖೆ ನಡೆದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.

rohini

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net