More

    ಪ್ರತಿಭಟನೆ ಬಿಸಿ: ರೋಹಿತ್ ಚಕ್ರತೀರ್ಥಗೆ ಇಂದು ನಡೆಯಬೇಕಿದ್ದ ‘ನಾಗರಿಕ ಸನ್ಮಾನ’ ಮುಂದೂಡಿಕೆ

    ಮಂಗಳೂರು: ಸಾಹಿತಿ, ಚಿಂತಕ ರೋಹಿತ್ ಚಕ್ರತೀರ್ಥ ಅವರನ್ನು ಸನ್ಮಾನಿಸಲೆಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ‘ನಾಗರಿಕ ಸನ್ಮಾನ’ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

    ಸೇವಾಂಜಲಿ ಚಾರಿಟಬಲ್​​ ಟ್ರಸ್ಟ್ ಸಹಯೋಗದೊಂದಿಗೆ ಚಿಂತನಾ ಗಂಗಾ ವತಿಯಿಂದ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲಿನ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ಶನಿವಾರ(ಜೂ.25) ನಾಗರಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಉದ್ಭವಿಸಿದ ವಿವಾದದ ಇನ್ನೂ ತಣ್ಣಗಾಗಿಲ್ಲ. ಹಾಗಾಗಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿ‌, ಗಲಾಟೆ, ದೊಂಬಿ ನಡೆಸಿ ನಗರದ ಶಾಂತಿ, ಸುವ್ಯವಸ್ಥೆ ಹಾಳು ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

    ಪ್ರತಿಭಟನೆ ಬಿಸಿ: ರೋಹಿತ್ ಚಕ್ರತೀರ್ಥಗೆ ಇಂದು ನಡೆಯಬೇಕಿದ್ದ 'ನಾಗರಿಕ ಸನ್ಮಾನ' ಮುಂದೂಡಿಕೆ

    ಈ ಕಾರ್ಯಕ್ರಮದಲ್ಲಿ ‘ಭರತ ಖಂಡದ ಗತವೈಭವ ಮತ್ತು ಅಳಿಸಿ ಹೋದ ಇತಿಹಾಸ’ ಕುರಿತು ರೋಹಿತ್ ಚಕ್ರತೀರ್ಥರಿಂದ ವಿಚಾರ ಮಂಡನೆ, ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ವಹಿಸಬೇಕಿತ್ತು.

    ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

    ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts