ಬೆಂಗಳೂರಿನಲ್ಲಿ ಲಾಂಗ್‌ನಿಂದ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ!

butal
Published on

ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಕಾರ್ತಿಕೇಯನ್ (40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

ಇಂದು ಸಂಜೆ ವೇಳೆಗೆ ದುಷ್ಕರ್ಮಿಗಳು ಸಂಚು ರೂಪಿಸಿ ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್​ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತೀವ್ರ ರಕ್ತಸ್ರಾವವಾಗಿ ಕಾರ್ತಿಕೇಯನ್ ರಸ್ತೆಯಲ್ಲೇ ಮೃತಪಟ್ಟಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net