ಆಲೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಆಲೂರು: ಮಂಗಳೂರು-ಹಾಸನ ಮಾರ್ಗದ ಸಕಲೇಶಪುರ ತಾಲೂಕು ಬಾಳ್ಳುಪೇಟೆ- ಅಚ್ಚಂಗಿ ನಡುವೆ ರೈಲ್ವೆ ಹಳಿ ಮೇಲೆ ಶುಕ್ರವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ರೈಲು ಪ್ರಯಾಣ ಸ್ಥಗಿತಗೊಂಡಿದ್ದರಿಂದ ಆಲೂರು ರೈಲು ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಪರದಾಡಿದರು.


ಭೂಕುಸಿತದಿಂದ ರೈಲ್ವೆ ಹಳಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತಗೊಂಡಿತು. ಇದರಿಂದ ಪ್ರಯಾಣ ಆರಂಭಿಸಿದ್ದ ಆರು ರೈಲುಗಳನ್ನು ಸಕಲೇಶಪುರ, ಯಡಕುಮರಿ, ಶಿರವಾಗಿಲು, ಆಲೂರು ಸೇರಿ ಆರು ನಿಲ್ದಾಣಗಳಲ್ಲಿ ನಿಲ್ಲಿಸಲಾಗಿತ್ತು


ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಾವಿರಾರು ಪ್ರಯಾಣಿಕರು ಮಧ್ಯರಾತ್ರಿಯಿಂದ ಪ್ರಯಾಣದ ಅನಿಶ್ಚಿತತೆಗೆ ಸಿಲುಕಿ ಪರದಾಡುವಂತಾಯಿತು. ಆಲೂರು ರೈಲು ನಿಲ್ದಾಣ ಸಮೀಪ ಯಾವುದೇ ಹೋಟೆಲ್ಗಳು ಹಾಗೂ ನಿಲ್ದಾಣದಲ್ಲಿ ಮೂಲಸೌಕರ್ಯ ಇಲ್ಲದ ಕಾರಣ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈಲ್ವೆ ಇಲಾಖೆಯಿಂದ ನಮಗೆ ಪರ್ಯಾಯ ವಾಹನ ವ್ಯವಸ್ಥೆಗೆ ಒತ್ತಾಯಿಸಿದರು. ಇದಕ್ಕೆ ಮಣಿದ ಇಲಾಖೆಯ ಅಧಿಕಾರಿಗಳು ಹಾಸನದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲನ್ನು ಪುನಾ ಆಲೂರಿನಿಂದ ಹಾಸನ ರೈಲು ನಿಲ್ದಾಣಕ್ಕೆ ವಾಪಸ್ ಕಳಿಕೊಟ್ಟರು.


ಆಲೂರು ರಾಧಮ್ಮ ಜನಸ್ಪಂದನ ಸಂಸ್ಥೆಯ ಅಧ್ಯಕ್ಷ ಹೇಮಂತ್ ಕುಮಾರ್, ಹಾಗೂ ಕರವೇ ತಾಲೂಕು ಉಪಾಧ್ಯಕ್ಷ ನವೀನ್ ಪ್ರಯಾಣಿಕರಿಗೆ ನೀರು ಹಾಗೂ ಬಿಸ್ಕೆಟ್, ತಿಂಡಿ ವಿತರಿಸಿ ಮಾನವೀಯತೆ ಮೆರೆದರು.

ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಆಲೂರು ತಾಲೂಕು ಕೇಂದ್ರದಲ್ಲಿ ರೈಲು ನಿಲ್ದಾಣ ನಿರ್ಮಾಣ ಮಾಡಿದ್ದಾರೆ. ಆದರೆ ಸಂಬಂಧಪಟ್ಟವರ ಇಚ್ಛಾಶಕ್ತಿ ಕೊರತೆಯಿಂದ ಮೂಲ ಸೌಕರ್ಯ ಇಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸುವಂತೆ ರಾಧಮ್ಮ ಜನಸ್ಪಂದನ ಸಂಸ್ಥೆ ಅಧ್ಯಕ್ಷ ಹೇಮಂತ್ ಕುಮಾರ್ ಒತ್ತಾಯಿಸಿದ್ದಾರೆ.


Share This Article

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…

ದಿನಕ್ಕೊಂದು ಬಾಳೆಹಣ್ಣು ಎನ್ನುವ ಹಾಗೆ 30 ದಿನ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

 ಬೆಂಗಳೂರು: ಪ್ರತಿದಿನ ಬಾಳೆಹಣ್ಣು ತಿನ್ನಬೇಕು. ಇದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮಾವು ಹಣ್ಣುಗಳ ರಾಜನಾಗಿರಬಹುದು ಆದರೆ…

ತಲೆಯಲ್ಲಿ ಎರಡು ಸುಳಿ ಇದ್ರೆ ಎರಡು ಮದ್ವೆ ಆಗ್ತಾರೆ! ನಿಜಕ್ಕೂ ಇದು ಸತ್ಯಾನಾ?

ಬೆಂಗಳೂರು:  ಪ್ರತಿಯೊಬ್ಬರ ತಲೆಯ ಮೇಲೆ ಸುಳಿಗಳಿರುವುದು ಸಾಮಾನ್ಯ. ಈ ಸುರುಳಿಗಳು ಹುಟ್ಟಿನಿಂದಲೇ ತಲೆಯ ಮೇಲೆ ಇರುತ್ತವೆ.…