ಮದ್ಯದ ಅಮಲಿನಲ್ಲಿ ದೇವಸ್ಥಾನದ ಸಾಧುವಿನ ಮೇಲೆ ಹಲ್ಲೆ; ಕೊಡಲಿಯಿಂದ ಹೊಡೆದು ಕೊಂದ ಪಾಪಿ!

Murder_571_855
Published on

ಆಗ್ರಾ: ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು, ದೇವಸ್ಥಾನ ಹೊಕ್ಕು, ಅಲ್ಲಿದ್ದ ಸಾಧುವಿನೊಂದಿಗೆ ಜಗಳವಾಡಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆಗ್ರಾದ ದೇವಸ್ಥಾನವೊಂದರಲ್ಲಿ ಇಂತಹ ಘಟನೆ ನಡೆದಿದೆ. ಕಳೆದ ಮಂಗಳವಾರ ರಾತ್ರಿ ಹೊತ್ತಿಗೆ ಜೀತು ಹೆಸರಿನ ವ್ಯಕ್ತಿ ಕಂಠಪೂರ್ತಿ ಕುಡಿದು ದೇವಸ್ಥಾನಕ್ಕೆ ಬಂದಿದ್ದಾನೆ. ಈ ರೀತಿ ಬಂದ ಜೀತುವನ್ನು ಅಲ್ಲಿದ್ದ ಶಿವಗಿರಿ ಹೆಸರಿನ ಸಾಧು ತಡೆದಿದ್ದಾನೆ. ಕುಡಿದು ದೇವಸ್ಥಾನಕ್ಕೆ ಬರಬೇಡ ಎಂದು ಎಚ್ಚರಿಸಿದ್ದಾನೆ. ಈ ವಿಚಾರದಲ್ಲಿ ಅವರಿಬ್ಬರ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೇರಿದ್ದು, ಅಲ್ಲೇ ಇದ್ದ ಕೊಡಗಿಯನ್ನು ಕೈಗೆತ್ತಿಕೊಂಡ ಜೀತು ಸಾಧುವಿನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ಬುಧವಾರ ಬೆಳಗ್ಗೆ ದೇವಸ್ಥಾನಕ್ಕೆ ಬಂದ ಭಕ್ತರಿಗೆ ಸಾಧು ರಕ್ತದ ಮಡುವಿನಲ್ಲಿ ಮಲಗಿರುವುದು ಕಂಡುಬಂದಿದೆ. ತಕ್ಷಣ ಈ ವಿಚಾರವನ್ನು ಪೊಲೀಸರಿಗೆ ಮುಟ್ಟಿಸಲಾಗಿದೆ. ತನಿಖೆ ನಡೆಸಿದಾಗ ಜೀತುವಿನ ಮೇಲೆ ಅನುಮಾನ ಬಂದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ಹೇಳಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net