ಮುಲಾಯಂ ಸಿಂಗ್ ಯಾದವ್​ ನಿಧನ: ಕಳಚಿತು ರಾಜಕೀಯದ ಬಹುದೊಡ್ಡ ಕೊಂಡಿ...

Mulayam Singh Yadav
Published on

ಲಖನೌ: ಸಮಾಜವಾದಿ ಪಕ್ಷದ(ಎಸ್‍ಪಿ) ಸಂಸ್ಥಾಪ, ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್(82) ಅವರು ಸೋಮವಾರ ಬೆಳಗ್ಗೆ ನಿಧನರಾದರು. ಈ ಮೂಲಕ ದೇಶದ ರಾಜಕೀಯದಲ್ಲಿ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ.

ಇತ್ತೀಚಿಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್​ ಅವರು ಆ.21ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು ಎಂದು ಅವರ ಪುತ್ರ ಅಖಿಲೇಶ್​ ಯಾದವ್​ ತಿಳಿಸಿದ್ದಾರೆ.

1939ರ ನವೆಂಬರ್​ 22ರಂದು ಉತ್ತರಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದಲ್ಲಿ ಜನಿಸಿದ ಮುಲಾಯಂ ಸಿಂಗ್​ ಯಾದವ್​, 1992ರಲ್ಲಿ ಸಮಾಜವಾದಿ ಪಕ್ಷ ಸ್ಥಾಪಿಸಿದ್ದರು. 1967ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದ ಮುಲಾಯಂ, ನಂತ 8 ಬಾರಿ ಶಾಸಕರಾಗಿ ಆಯ್ಕೆಯಾದರು. ಸತತ ಮೂರು ಬಾರಿ ಸಿಎಂ ಆಗಿದ್ದರು. 1989, 1993 ಹಾಗೂ 2003ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net