More

    ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್​, ಅಂಗಾಂಗ ದಾನದಿಂದ 7 ಜನರಿಗೆ ಹೊಸ ಬದುಕು

    ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ನಿಧನರಾಗಿದ್ದು, ಸಾವಿನಲ್ಲೂ 7 ಜನರಿಗೆ ಜೀವದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

    ಮಿದುಳು ಡೆಡ್​ ಆಗಿದ್ದರಿಂದ ವಿಜಯ್​ರ 7 ಅಂಗಾಂಗವನ್ನು ಕುಟುಂಬಸ್ಥರ ದಾನ ಮಾಡಿದ್ದಾರೆ. ಕಣ್ಣು, ಪಿತ್ತಕೋಶ, ಮೂತ್ರಪಿಂಡ, ಹೃದಯದ ಕವಾಟಗಳನ್ನು ದಾನ ಮಾಡಲಾಗಿದ್ದು, 7 ಜನರ ಜೀವ ಉಳಿಸುವ ಕೆಲಸ ಸಾಗಿದೆ. ಹೀಗಾಗಲೇ ಸಂಬಂಧಪಟ್ಟ ಆಸ್ಪತ್ರೆಗಳು ಅಂಗಾಂಗ ತೆಗೆದುಕೊಂಡು ಹೋಗಿದ್ದು, ಅಲ್ಲಿ ಕಸಿ ನಡೆಯುತ್ತಿದೆ ಎಂದು ಜೀವ ಸಾರ್ಥಕತೆ ತಂಡ ತಿಳಿಸಿದೆ.

    ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್​, ಅಂಗಾಂಗ ದಾನದಿಂದ 7 ಜನರಿಗೆ ಹೊಸ ಬದುಕು

    ಜೂ.12ರ ರಾತ್ರಿ​ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಕೋಮಾಗೆ ತಲುಪಿದ್ದ ವಿಜಯ್​ ಅವರ ಬ್ರೈನ್​ ಡೆತ್​ಗೆ ಆಗಿದೆ ಎಂದು ಸೋಮವಾರ ರಾತ್ರಿ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡಿತ್ತು. ಅಂಗಾಗ ದಾನ ಪ್ರಕ್ರಿಯೆ ಮುಗಿದ ಬಳಿಕ ಡೆತ್ ಡಿಕ್ಲೆರೇಷನ್ ಮಾಡಲಾಗಿದೆ. ಸಾವಿನಲ್ಲೂ ಸಾರ್ಥಕತೆ ಮರೆದ ವಿಜಯ್​, ಹಲವರಿಗೆ ಜೀವದಾನ ನೀಡುವ ಮೂಲಕ ಅಭಿಮಾನಿಗಳ ಮನಸ್ಸಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಇಂದು ಬೆಳಗ್ಗೆ 8 ರಿಂದ 10ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್​ರ ಅಂತಿಮ ದರ್ಶನಕ್ಕೆ ಸರ್ಕಾರದ ಕಡೆಯಿಂದಲೇ ವ್ಯವಸ್ಥೆ ಮಾಡಲಾಗಿದೆ. ವಿಜಯ್​ರ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.

    ಸಾವಿಗೂ 4 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

    ಇಂದು ಮುಂಜಾನೆ 3.34ಕ್ಕೆ ಸಂಚಾರಿ ವಿಜಯ್​ ನಿಧನ, ವೈದ್ಯರ ಘೋಷಣೆ

    ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

    ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts