ಶಾಲಾ ಬಸ್​ಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ಶಿಕ್ಷಕ ಸಾವು

New Project
Published on

ಚಿತ್ರದುರ್ಗ: ಶಾಲಾ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ನಂದಿಹಳ್ಳಿ ಬಳಿ ಸಂಭವಿಸಿದೆ.

ಬಹದ್ದೂರ್​ಘಟ್ಟ ಗ್ರಾಮದ ಕಲ್ಲಮ್ಮ ಪ್ರೌಢಶಾಲೆ ಶಿಕ್ಷಕ ಪ್ರದೀಪ್(40) ಮೃತರು. ಶನಿವಾರ ಬೆಳಗ್ಗೆ ತರಗತಿಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ನಂದಿಹಳ್ಳಿ ಬಳಿ ಸ್ಕೂಲ್​ ಬಸ್​ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಶಿಕ್ಷಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net