More

    ರಾಜ್ಯ ಸರ್ಕಾರದ ವಿರುದ್ಧ ಸ್ವಾಭಿಮಾನಿ ಸಾಮಾಜಿಕ ನ್ಯಾಯವೇದಿಕೆ ಪ್ರತಿಭಟನೆ

    ಚನ್ನರಾಯಪಟ್ಟಣ: ಅಯೋಧ್ಯೆಯ ರಾಮ ಜನ್ಮಭೂಮಿಗಾಗಿ ಹುಬ್ಬಳ್ಳಿಯಲ್ಲಿ 30 ವರ್ಷಗಳ ಹಿಂದೆ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವುದ್ನು ಖಂಡಿಸಿ ಸ್ವಾಭಿಮಾನಿ ಸಾಮಾಜಿಕ ನ್ಯಾಯವೇದಿಕೆ ಪದಾಧಿಕಾರಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

    ಪಟ್ಟಣದ 40 ಅಡಿ ಆಂಜನೇಯ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಸೀಲ್ದಾರ್ ಕಚೇರಿ ತಲುಪಿತು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯ ಸರ್ಕಾರ ಹಿಂದು ಕಾರ್ಯಕರ್ತರನ್ನು ಬೆದರಿಸುವ ಕೆಲಸ ಮಾಡುತ್ತಿದ್ದು, ಇದು ಹಿಂದು ಹಾಗೂ ರಾಮ ವಿರೋಧಿ ಸರ್ಕಾರ ಎಂದು ವೇದಿಕೆಯ ನಂಬಿಹಳ್ಳಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು.

    ಕಾಂಗ್ರೆಸ್ ದ್ವೇಷದ ರಾಜಕಾರಣ ಆರಂಭಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರನ್ನು ದಮನ ಮಾಡುವ ಕೆಲಸವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿನ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗುತ್ತಿರುವ ಸಂದರ್ಭದಲ್ಲಿ ಪೊಲೀಸರು ಈ ಹಳೆಯ ಪ್ರಕರಣದಲ್ಲಿ ರಾಮಜನ್ಮ ಭೂಮಿ ಹೋರಾಟಗಾರನನ್ನು ಬಂಧಿಸಿರುವುದು ಖಂಡನಿಯ ಎಂದು ಕಿಡಿಕಾರಿದರು.

    ವಿಶ್ವದ ಕೋಟ್ಯಂತರ ಹಿಂದುಗಳ ಕನಸು ಅಯೋಧ್ಯೆಯಲ್ಲಿ ನನಸಾಗುವ ಕ್ಷಣ ಸನ್ನಿಹಿತವಾಗಿದೆ. ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಮೂಲಕ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದು ಹಾಗೂ ರಾಮ ಮಂದಿರ ನಿರ್ಮಾಣಕ್ಕೆ ವಿರೋಧವಿದೆ ಎಂಬ ಸಂದೇಶ ಸಾರಿದೆ. ಶ್ರೀಕಾಂತ್ ಪೂಜಾರಿ ಅವರನ್ನು ಜೈಲಿನಿಂದ ತಕ್ಷಣ ಬಿಡುಗಡೆ ಮಾಡಬೇಕು. ಇದೇ ರೀತಿ ಹಿಂದು ವಿರೋಧಿ ಧೋರಣೆ ಅನುಸರಿಸಿದರೆ ದೇಶದ ಜನತೆಯೇ ಮುಗಿಬೀಳಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ತಹಸೀಲ್ದಾರ್ ಬಿ.ಎಂ.ಗೋವಿಂದರಾಜು ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು. ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಎಂ.ರವಿ ಮನೋಹರ್, ನಂದೀಶ್, ನಂಜುಂಡ ಮೈಮ್, ಸಂತೋಷ್, ನಾಗೇಶ್, ವೆಂಕಟೇಶ್, ದುಶ್ಯಂತ್, ರಂಗೇಗೌಡ, ಹರ್ಷವರ್ಧನ್, ರಘುರಾಜೇಗೌಡ ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts