More

    ಕಾಂಗ್ರೆಸ್​ನ ಹಿರಿಯ ಮುಖಂಡ ಆಸ್ಕರ್‌ ಫರ್ನಾಂಡಿಸ್‌ ನಿಧನ

    ಮಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌(80) ಸೋಮವಾರ ಮಧ್ಯಾಹ್ನ ನಿಧನರಾದರು.

    2021ರ ಜುಲೈ 19ರಂದು ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದ ಫರ್ನಾಂಡಿಸ್​ ಅವರು ಅಂದು ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನದಿಂದ ಪ್ರಜ್ಞಾಶೂನ್ಯರಾಗಿದ್ದರು. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದಾದ ಒಂದು ವಾರಕ್ಕೆ ಮಿದುಳಿನ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ಕೊಂಚ ಚೇತರಿಕೆ ಕಂಡಿದ್ದಾರೆ ಎಂದೇ ಹೇಳಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

    1941ರ ಮಾರ್ಚ್ 27ರಂದು ಲಿಯೋನಿಸ್ಸಾ ಫರ್ನಾಂಡಿಸ್ ದಂಪತಿ ಪುತ್ರನಾಗಿ ಉಡುಪಿಯಲ್ಲಿ ಆಸ್ಕರ್ ಫರ್ನಾಂಡಿಸ್ ಜನಿಸಿದ್ದರು. ತಂದೆ ಬ್ರಿಟಿಷರ ವಿರುದ್ಧ ಧ್ವನಿಯೆತ್ತಿದ ಹೋರಾಟಗಾರ. ತಾಯಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಬೆಂಚ್ ಮ್ಯಾಜಿಸ್ಟ್ರೇಟ್ ಆಗಿದ್ದರು. 1972ರಲ್ಲಿ ಉಡುಪಿ ಮುನ್ಸಿಪಾಲಿಟಿಯ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದ್ದ ಆಸ್ಕರ್ ಫರ್ನಾಂಡಿಸ್, 1980ರಲ್ಲಿ ಮೊದಲ ಬಾರಿ ಉಡುಪಿ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದ್ದರು. 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು ಕೇಂದ್ರದಲ್ಲಿ ಸಾರಿಗೆ, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 1998ರಿಂದ ಒಟ್ಟು ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸೋನಿಯಾ ಗಾಂಧಿ ಕುಟುಂಬದ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಪ್ರವೇಶಕ್ಕೂ ಮುನ್ನ ಭಾರತೀಯ ಜೀವ ವಿಮಾ ನಿಗಮದ ಉದ್ಯೋಗಿಯಾಗಿದ್ದರು.

    ಸರ್ಕಾರವನ್ನು ಹಣಿಯಲು ಕಾಂಗ್ರೆಸ್​ ಸಜ್ಜು: ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿಯಲ್ಲಿ ಹೊರಟ ಕಾಂಗ್ರೆಸ್ ನಾಯಕರು

    ತುಮಕೂರಲ್ಲಿ ಗಂಡನನ್ನ ಕೊಂದು ಚರಂಡಿಗೆ ಎಸೆದ ಪತ್ನಿ! ಬೆಚ್ಚಿಬೀಳಿಸುತ್ತೆ ಅವಳ ಕ್ರೂರತನ

    ಹುಣಸೂರಲ್ಲಿ ಮಗನ ಜತೆ ಚಿಕ್ಕಮ್ಮನ ಕಾಮದಾಟ! ಗುಟ್ಟು ರಟ್ಟಾಗುತ್ತಿದ್ದಂತೆ ನಡೆದೇ ಹೋಯ್ತು ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts