More

    ಸ್ಕೌಟ್ಸ್, ಗೈಡ್ಸ್‌ನಿಂದ ಮಕ್ಕಳಲ್ಲಿ ಸಾಹಸ ಪ್ರಜ್ಞೆ

    ಮೈಸೂರು: ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಸಾಹಸ ಪ್ರಜ್ಞೆ, ಪರಿಸರ ಪ್ರಜ್ಞೆ ಮೂಡಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರೂ ಆದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.


    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ನಗರದ ಗೋಕುಲಂನಲ್ಲಿರುವ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ವಿಭಾಗ ಮಟ್ಟದ ರೋವರ್ ಮತ್ತು ರೇಂಜರ್ ಮಕ್ಕಳ ಸಮಾವೇಶದಲ್ಲಿ ಮಾತನಾಡಿದರು.


    ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಆದ್ದರಿಂದ ಎಲ್ಲ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.


    ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸವಾಗಲಿದೆ. ಮನುಷ್ಯನಿಗೆ ಸಂತೋಷ ಮತ್ತು ಆನಂದ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಸಿಗಲು ಸಾಧ್ಯ ಎಂದರು.


    ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಜಿಲ್ಲೆಗಳಿಂದ 60 ಶಾಲೆಗಳ 1,150 ರೋವರ್ ಮತ್ತು ರೇಂಜರ್‌ಗಳು ಭಾಗವಹಿಸಿದ್ದರು. ‘ಸುಸ್ಥಿರ ಅಭಿವೃದ್ಧಿ ಗುರಿಗಳು’ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮೂರು ಗೋಷ್ಠಿಗಳು ನಡೆದವು.


    ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಪ್ರೊ.ಎ.ಎಚ್.ಎಂ.ವಿಜಯಲಕ್ಷ್ಮ್ಮೀ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಆಯುಕ್ತ ಪಿ.ವಿಶ್ವನಾಥ್, ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಜಮೀಲ್, ಜಿಲ್ಲಾ ಖಜಾಂಚಿ ಡಾ.ಕೆ.ಬಿ.ಗುರುಮೂರ್ತಿ, ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಗುಂಡಪ್ಪಗೌಡ, ಗೌರವ ಕೋಶಾಧ್ಯಕ್ಷ ಡಾ.ಎಂ.ಶ್ರೀಶೈಲರಾಮಣ್ಣವರ್, ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಶಿವಲಿಂಗೇಗೌಡ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts