

ಮುಂಬೈ: ಮಾಡೆಲ್ಗಳನ್ನು ಬಳಸಿಕೊಂಡು ಪೋರ್ನ್ ವಿಡಿಯೋಗಳ ನಿರ್ಮಿಸಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಸಿಕ್ಕಿಬಿದ್ದ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಅವರ ಪತಿ ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮುಂಬೈನ ಕಿಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
45 ವರ್ಷದ ರಾಜ್ ಕುಂದ್ರಾನನ್ನು ಜುಲೈ 19ರಂದು ಮುಂಬೈ ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಿದ್ದು, 7 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮನವಿ ಮಾಡಿದ್ದರು. ಈ ಮನವಿಯನ್ನು ತಳ್ಳಿ ಹಾಕಿದ ಕೋರ್ಟ್, ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿದೆ.