ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಮೇಲೂ ದಾಖಲಾಗಿತ್ತು 4 ಪ್ರಕರಣ

shimoga harsha 3
Published on

ಶಿವಮೊಗ್ಗ: ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷನ ಮೇಲೂ ನಗರದ ದೊಡ್ಡಪೇಟೆ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು.

ಬಜರಂಗ ದಳ, ವಿಶ್ವ ಹಿಂದೂಪರಿಷತ್ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ ಹರ್ಷ, ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಪರ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಿದ್ದ. ಜತೆಗೆ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಮಾಡುತ್ತಿದ್ದ. ಆರು ತಿಂಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೆ ಒಳಪಟ್ಟಿದ್ದ. ಬಳಿಕ ಬಿಡುಗಡೆಗೊಳ್ಳುವಾಗ ದುಷ್ಕರ್ಮಿಗಳು ಕೊಲೆಗೆ ಸ್ಕೆಚ್ ಹಾಕಿದ್ದು, ಎಚ್ಚರಿಕೆಯಿಂದ ಇರುವಂತೆ ಪೊಲೀಸರೇ ಹರ್ಷನಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಹಿಂದೂಪರ ಕಾರ್ಯಗಳ ಜತೆಗೆ ಗೋರಕ್ಷಣೆ ಕಾರ್ಯದಲ್ಲೂ ತೊಡಗಿಕೊಂಡಿದ್ದ. ಇಂಜಿನಿಯರ್‌ವೊಬ್ಬರ ಸಹಾಯಕವಾಗಿಯೂ ಕೆಲಸ ಮಾಡಿಕೊಂಡಿದ್ದ. ಹರ್ಷನ ತಂದೆ ನಾಗರಾಜ್ ಅವರು ಟೈಲರ್ ಆಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net