More

    ಹರ್ಷನ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳ ಪ್ರತಿಭಟನೆ

    ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆ ಖಂಡಿಸಿ, ಕೊಲೆಗಾರರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬುಧವಾರವೂ ರಾಜ್ಯಾದ್ಯಂತ ಹಿಂದುಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈಗಾಗಲೇ ಕೊಲೆ ಪ್ರಕರಣ ಸಂಬಂಧ ಪೊಲೀಸರು 12 ಮಂದಿಯನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು, ಬೂದಿ ಮುಚ್ಚಿದ ಕೆಂಡದಂತಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

    ಅರಸೀಕೆರೆ ಬಂದ್: ಹಾಸನ ಜಿಲ್ಲೆ ಅರಸೀಕೆರೆ ಬಂದ್​ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಬೃಹತ್​ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    ಬೆಳಗಾವಿಯಲ್ಲಿ ಬೃಹತ್​ ಪ್ರತಿಭಟನಾ ಮೆರವಣಿಗೆ: ಜಿಲ್ಲೆ ಅಥಣಿ ಪಟ್ಟಣದಲ್ಲಿ ಭಜರಂಗದಳ ಪ್ರತಿಭಟನಾ ರ್ಯಾಲಿ ನಡೆಸಿತು. ಶಿವಾಜಿ ಸರ್ಕಲ್​ನಲ್ಲಿ ‘ಜೈ ಶ್ರೀರಾಮ್​’ ಘೋಷಣೆ ಕೂಗುತ್ತಾ ಭಜರಂಗದಳ ರ್ಯಾಲಿ ನಡೆಸಿತು. ಬೆಳಗಾವಿಯಲ್ಲೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಶ್ವ ಹಿಂದೂ ಪರಿಷತ್, ಭಜರಂಗದಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ‘ಅಮರ್ ರಹೇ, ಹರ್ಷ ಅಮರ್ ರಹೇ, ‘ಜೈ ಶ್ರೀರಾಮ್, ಭಾರತ ಮಾತಾಕೀ ಜೈ’ ಅಂತಾ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಚೆನ್ನಮ್ಮ ವೃತ್ತದಲ್ಲಿ ಹರ್ಷಗೆ ನೂರಾರು ಹಿಂದು ಪರ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು.

    ಮಡಿಕೇರಿಯಲ್ಲೂ ಹೋರಾಟ: ಹರ್ಷನ ಹತ್ಯೆ ಖಂಡಿಸಿ ಮಡಿಕೇರಿಯಲ್ಲೂ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಕೊಲೆಗಾರರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯ ಮಾಡಿದರು. ನಾವು ಕಾನೂನಿಗೆ ಗೌರವ ಕೊಡುತ್ತೇವೆ. ಹಾಗಂತ ಅದು ನಮ್ಮ ದುರ್ಬಲ ಅಂತ ಭಾವಿಸಬೇಡಿ ಎಂದು ಎಚ್ಚರಿಕೆ ನೀಡಿದರು.

    ಹರ್ಷನ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳ ಪ್ರತಿಭಟನೆ

    ವಿಜಯಪುರದಲ್ಲಿ ಪಿಸ್ತೂಲ್​ ಸಮೇತ ಬಂದ ಮುಖಂಡ: ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಬಳಿತಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಹಮ್ಮಿಕೊಂಡ ಪ್ರತಿಭಟನಾ ರ್ಯಾಲಿಯಲ್ಲಿ ಶ್ರೀ ಸೋಮನಿಂಗ ಸ್ವಾಮೀಜಿ, ಶ್ರೀ ಯೋಗೇಶ್ವರಿ ಮಾತಾ, ಶ್ರೀ ವೀರಕೇಸರಿ ಸ್ವಾಮೀಜಿ ಪಾಲ್ಗೊಂಡಿದ್ದಾರೆ. ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ ಅಣ್ಣಿಗೇರಿ ಎಂಬಾತ ಸೊಂಟದಲ್ಲಿ ಲೈಸನ್ಸ್ ಗನ್ ಇಟ್ಟುಕೊಂಡೇ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಜೀವ ಭಯ ಹಿನ್ನೆಲೆ ಗನ್ ಸಮೇತವೇ ಪ್ರತಿಭಟನೆಗೆ ಬಂದಿದ್ದಾರೆ. ಹೀಗೆ ಗದಗ, ಚಿತ್ರದುರ್ಗ, ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.

    ‘ಶಿವಮೊಗ್ಗದ ಹರ್ಷ ಮೇಲೆ ಕೊತ್ತಂಬರಿ ಸೊಪ್ಪು ತರಲು ಹೋದ… ಹುಡುಗಿ ಜತೆ ಹೋದ… ಕೇಸ್ ಇಲ್ಲ’

    ತಗೊಂಡಿದ್ದು 10 ಸಾವಿರ, ಕಟ್ಟಿದ್ದು 7 ಲಕ್ಷ ರೂ.! ಆನ್​ಲೈನ್​ ಆ್ಯಪ್​ನಲ್ಲಿ ಸಾಲ ಪಡೆದವನಿಗೆ ಬಂದ ಕಷ್ಟ ಅಷ್ಟಿಷ್ಟಲ್ಲ

    https://www.vijayavani.net/a-radio-jocky-rj-rachana-is-no-more/

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts