ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್​ ಹೆಬ್ಬಾರ್​ ಕಾರು ಡಿಕ್ಕಿ!

accident
Published on

ಹುಬ್ಬಳ್ಳಿ: ಸಿಎಂ‌ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನ ಮತ್ತು ಮಾಜಿ ಸಚಿವ ಶಿವರಾಮ್​ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ಬೆಳಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಮಳೆ ಬಾಧಿತ ಪ್ರದೇಶದ ಸಮೀಕ್ಷೆಗೆ ತೆರಳುವ ಹಿನ್ನೆಲೆಯಲ್ಲಿ ಬೆಂಗಳೂರಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಿಎಂ ಬಂದಿಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಸಿಎಂ ಹೊರ ಹೋಗುತ್ತಿದ್ದ ವೇಳೆ ಸಿಎಂ ಕಾರನ್ನು ಹಿಂಬಾಲಿಸುವ ಭರದಲ್ಲಿ ಶಿವರಾಮ್ ಹೆಬ್ಬಾರ್ ಅವರು ಪ್ರಯಾಣಿಸುತ್ತಿದ್ದ ಕಾರು, ಸಿಎಂ‌ ಬೆಂಗಾವಲು ವಾಹನಕ್ಕೆ ಹಿಂಬದಿಯಿಂದ ಗುದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯ ಸಂಭವಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net