More

    ನೀವು ತಿನ್ನುತ್ತಿರುವ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ: ಶೋಭಾ ಕರಂದ್ಲಾಜೆ

    ಮೈಸೂರು: ನೀವು ತಿನ್ನುತ್ತಿರುವ ಸೂರ್ಯಕಾಂತಿ ಮತ್ತು ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ. ಹಾಗಾಗಿ ಈ ವಿಷಯದಲ್ಲಿ ಭಾರತ ಸ್ವಾವಲಂಬಿ ಆಗಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

    ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರಂದ್ಲಾಜೆ, ಶೇ.70 ಅಡುಗೆ ತೈಲ ವಿದೇಶದಿಂದ ಆಮದಾಗುತ್ತಿದ್ದು, ಮಲೇಷ್ಯಾ ಹಾಗೂ ಇಂಡೋನೇಷ್ಯಾದಿಂದ ಪಾಮ್​ ಆಯಿಲ್​ ಬರುತ್ತದೆ. ಅದನ್ನು ಭಾರತದಲ್ಲಿ ರಿಫೈನ್​ ಮಾಡಿ ಬೇರೆ ಬೇರೆ ಲೇಬಲ್​ ಅಂಟಿಸಿ ಮಾರಾಟ ಮಾಡಲಾಗುತ್ತಿದೆ. ತೈಲ ಬೆಳೆಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಖಾದ್ಯ ತೈಲದ ವಿಷಯದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

    ನಮ್ಮದು ಕೃಷಿ ಆಧಾರಿತ ದೇಶವಾಗಿದ್ದು, ಶೇ.90 ಸಣ್ಣ ಹಾಗೂ ಮಧ್ಯಮ ಕೃಷಿಕರಿದ್ದಾರೆ. ಇಡೀ ದೇಶದಲ್ಲಿ ನಗರಕ್ಕೆ ಹತ್ತಿರವಿರುವ ಭೂಮಿಗಳು ಸೈಟ್​ಗಳಾಗುತ್ತಿವೆ. ಆದ್ದರಿಂದ ಸಣ್ಣ ಹಾಗೂ ಮಧ್ಯಮ ಕೃಷಿಕರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಂಘಗಳನ್ನು ಮಾಡಿದೆ. ವರ್ಷಕ್ಕೆ ತಲಾ 6 ಸಾವಿರ ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಹಾಕುತ್ತಿದೆ ಎಂದರು.

    ಮುಂದಿನ ಎರಡು ವರ್ಷಗಳಲ್ಲಿ ರಸಗೊಬ್ಬರದಲ್ಲಿ ಸ್ವಾವಲಂಬನೆ ಸಾಧಿಸುವುದು ನಮ್ಮ ಗುರಿಯಾಗಿದ್ದು, ಕೃಷಿ ಉತ್ಪನ್ನ ಹೆಚ್ಚಿರುವ ದೇಶಗಳ ಪೈಕಿ ಭಾರತ ಈ ಬಾರಿ 9ನೇ ಸ್ಥಾನದಲ್ಲಿ ಬಂದು ನಿಲ್ಲುವ ವಿಶ್ವಾಸವಿದೆ. ನಮ್ಮ ಉದ್ದೇಶ ಕೇವಲ ಕೃಷಿ ಮಾಡುವುದಲ್ಲ, ಅದನ್ನು ಮಾರಾಟ ಮಾಡುವ ತಂತ್ರ ಕಲಿಸುವುದು ಎಂದು ತಿಳಿಸಿದರು.

    ದೊಡ್ಡ ತ್ಯಾಗಕ್ಕೆ ಸಿದ್ಧರಾದರೇ ಡಿಕೆಶಿ? ಕುತೂಹಲ ಮೂಡಿಸಿದೆ ಅವರ ಈ ಮಾತು…

    ‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts