ತುಮಕೂರಲ್ಲಿ‌‌ ಜೆಡಿಎಸ್​ಗೆ ಶಾಕ್: ಒಂದೇ ದಿನ ನೂರಕ್ಕೂ ಹೆಚ್ಚು ಮಂದಿ ರಾಜೀನಾಮೆ

gubbi jds
Published on

ತುಮಕೂರು: ಶಾಸಕ ಎಸ್.ಆರ್.ಶ್ರೀನಿವಾಸ್ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಒಂದೇ ದಿನ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

ಗುಬ್ಬಿ ಕ್ಷೇತ್ರದಲ್ಲಿ 50 ಸಾವಿರಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತರಿದ್ದಾರೆ. ಇದೀಗ ಬಿದರೆ ಗ್ರಾಮದಲ್ಲಿ ರಾಜೀನಾಮೆ‌ ಸಲ್ಲಿಸಲು ಶನಿವಾರ ಮಹಿಳೆಯರು ಸೇರಿ ನೂರಾರು ಮಂದಿ ಒಂದೇ ಬಾರಿಗೆ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು.

ಜೆಡಿಎಸ್​ನಿಂದ ಶಾಸಕ ಎಸ್.ಆರ್.ಶ್ರೀನಿವಾಸ್​ಗೆ ಅನ್ಯಾಯ ಆಗಿದೆ. ಹಾಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ರಾಜೀನಾಮೆ ಕೊಟ್ಟ ಬಳಿಕ ವಾಸಣ್ಣ ಅಭಿಮಾನಿ ಬಳಗ ಸೇರುತ್ತಿದ್ದಾರೆ. ಬೂತ್ ಕಮಿಟಿ ಸೇರಿ ವಿವಿಧ ಹುದ್ದೆಗಳಿಗೆ ಹಲವರು ರಾಜೀನಾಮೆ ನೀಡಿದ್ದಾರೆ.

ಶಾಸಕ ಶ್ರೀನಿವಾಸ್ ಜೆಡಿಎಸ್ ಪಕ್ಷದಿಂದ ಹೊರಹೋಗುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ರಾಜೀನಾಮೆ ಪರ್ವ ಹೆಚ್ಚಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net