20.3 C
Bangalore
Sunday, December 15, 2019

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ ವೈದ್ಯರಿಗೆ ಶಾಕ್​ ! ವಿಡಿಯೋ ನೋಡಿದರೆ ನೀವೂ ದಂಗಾಗುತ್ತೀರಿ…

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ. ಕೆಲವರಂತೂ ದಿನಕ್ಕೆ ಅದೆಷ್ಟು ಸಿಗರೇಟ್​ ಸೇದುತ್ತಾರೆಂಬ ಲೆಕ್ಕವೇ ಇರುವುದಿಲ್ಲ.

ಈಗ ದಿನಕ್ಕೆ ಒಂದು ಪ್ಯಾಕೆಟ್​ ಸಿಗರೇಟ್​ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವನ ಶ್ವಾಸಕೋಶದ ವಿಡಿಯೋವನ್ನು ವೈದ್ಯರೇ ವೈರಲ್​ ಮಾಡಿದ್ದಾರೆ. 30 ವರ್ಷ ಸತತ ಸ್ಮೋಕಿಂಗ್​ ಮಾಡುತ್ತಿದ್ದವನ ಈ ಶ್ವಾಸಕೋಶ ರಸ್ತೆಗೆ ಹಾಕುವ ಡಾಂಬರಿನಷ್ಟೇ ಕಪ್ಪಾಗಿದ್ದನ್ನು ವಿಡಿಯೋದಲ್ಲಿ ನೋಡಬಹುದು.

ಇಂಥದ್ದೊಂದು ವಿಡಿಯೋ ವೈರಲ್​ ಆಗಿದ್ದು ಚೀನಾದಿಂದ. ಆ ವ್ಯಕ್ತಿ ತನ್ನ 52ನೇ ವಯಸ್ಸಿನಲ್ಲಿ ಮೃತಪಟ್ಟಿದ್ದ. ಆತನ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡುವ ಸಲುವಾಗಿ ಸರ್ಜನ್​ಗಳು ಅದನ್ನು ಹೊರತೆಗೆದರು. ಆದರೆ ಅದನ್ನು ನೋಡಿದ ಮೇಲೆ ಕಸಿ ಮಾಡುವುದನ್ನು ಕೈಬಿಡಲಾಯಿತು.

ವಿಡಿಯೋವನ್ನು ಆಸ್ಪತ್ರೆಯ ವೈದ್ಯರೇ ಚಿತ್ರೀಕರಿಸಿ ವೈರಲ್​ ಮಾಡಿದ್ದಾರೆ. ಇದಕ್ಕೆ ಈಗಾಗಲೇ 25 ದಶಲಕ್ಷ​ ವೀವ್ಸ್​ ಬಂದಿವೆ. ಇದೊಂದು ಅತ್ಯುತ್ತಮವಾದ ಧೂಮಪಾನ ವಿರೋಧಿ ಜಾಹೀರಾತು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವೈದ್ಯರು ಈ ಕಪ್ಪಾದ ಶ್ವಾಸಕೋಶವನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅದೆಷ್ಟೋ ಮಂದಿ ಸ್ಮೋಕರ್​ಗಳ ಶ್ವಾಸಕೋಶ ಹೀಗೆ ಇರುತ್ತದೆ. ಇಂತಹವುಗಳನ್ನು ನಾವು ಯಾರಿಗೂ ಕಸಿ ಮಾಡುವುದಿಲ್ಲ ಎಂದು ಆಸ್ಪತ್ರೆಯ ಸರ್ಜನ್​ ಹೇಳಿದ್ದಾರೆ.

ವಿಡಿಯೋ ನೋಡಿದ ಸಾಮಾಜಿಕ ಜಾಲತಾಣ ಬಳಕೆದಾರರು ಸಿಕ್ಕಾಪಟೆ ಕಾಮೆಂಟ್​ಗಳನ್ನು ಬರೆಯುತ್ತಿದ್ದಾರೆ. ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿವರ್ಷ 8 ಮಿಲಿಯನ್​ಗೂ ಅಧಿಕ ಮಂದಿ ತಂಬಾಕು ಸೇವನೆಯಿಂದಲೇ ಮೃತಪಡುತ್ತಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ನೀಡಿದೆ. (ಏಜೆನ್ಸೀಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...