ಶಾಲಾ- ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ: ಸಿದ್ದರಾಮಯ್ಯ ಆಕ್ರೋಶ

siddarammai
Published on

ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್​ ಧರಿಸಬಾರದು ಎಂಬ ನಿಯಮವೇ ಇಲ್ಲ. ಈಗ ಕೆಲ ಕಾಲೇಜುಗಳಲ್ಲಿ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶಿಸದಂತೆ ತಡೆಯಲಾಗಿದೆ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ಎಲ್ಲೂ ಸರ್ಕಾರ ಹೇಳಿಲ್ಲ. ಕುಂದಾಪುರದ ಸರ್ಕಾರಿ ಕಾಲೇಜೊಂದರ ಪ್ರಾಂಶುಪಾಲರು ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ವ್ಯಕ್ತಿಯೊಬ್ಬನ ಮೂಲಭೂತ ಹಕ್ಕಿನ ಉಲ್ಲಂಘನೆ. ಹಿಜಾಬ್ ಧರಿಸುವುದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರಿಂದ ಇತರರಿಗೇನು ತೊಂದರೆ? ಮುಸ್ಲಿಂ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತಗೊಳಿಸುವ ಕುಟಿಲ ಪ್ರಯತ್ನ ಇದು ಎಂದು ದೂರಿದರು.

ಕಾಲೇಜಿನ‌ ಪ್ರಾಂಶುಪಾಲರು ಗೇಟ್​ನಲ್ಲಿ ಮಕ್ಕಳನ್ನು ತಡೆಯುವುದು ಅಮಾನವೀಯ. ಸಮವಸ್ತ್ರ ಕಡ್ಡಾಯ ಮಾಡಿ ಎಂದು ಹೇಳಲು ರಘುಪತಿ ಭಟ್ ಯಾರು? ಸರ್ಕಾರ ಇಂಥದಕ್ಕೆ ಕುಮ್ಮಕ್ಕು ಕೊಡಬಾರದು. ಪ್ರಾಂಶುಪಾಲರನ್ನು ವಜಾ ಮಾಡಬೇಕು. ಇದು ಮಾನವೀಯತೆ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net