ಮಾಜಿ ಸಿಎಂ ಸಿದ್ದರಾಮಯ್ಯ ಶೀಘ್ರವೇ ಬಿಜೆಪಿ ಸೇರ್ಪಡೆ? ಅಚ್ಚರಿ ಮೂಡಿಸಿದ ಶಾಸಕ ರಾಜೂಗೌಡರ ಹೇಳಿಕೆ

siddaramaiah
Published on

ಬೆಂಗಳೂರು: ಸಿದ್ದರಾಮಯ್ಯರನ್ನು ಶೀಘ್ರವೇ ಬಿಜೆಪಿ​ಗೆ ಕರೆ ತರುವೆ. ಅದರಲ್ಲಿ ನಾನು ಯಶಸ್ವಿ ಆಗುವೆ ಎಂದು ಸುರಪುರ ಶಾಸಕ ರಾಜೂಗೌಡ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಅಚ್ಚರಿ ಮೂಡಿಸಿದೆ.

ಸೋಮವಾರ ವಿಧಾನಸೌಧದಲ್ಲಿ ಮಾತನಾಡಿದ ರಾಜೂಗೌಡ, ಕಾಂಗ್ರೆಸ್​​ನವರೇ ನಮ್ಮ ಪಕ್ಷಕ್ಕೆ ಬರುತ್ತೇವೆ ಎನ್ನುತ್ತಿದ್ದಾರೆ. ಇಲ್ಲಿ ಇದ್ದೋರಿಗೇ ಅವಕಾಶ ಸಿಗುತ್ತಿಲ್ಲ, ಅದಕ್ಕೆ ನಾವೇ ಬೇಡ ಅಂತಿದ್ದೇವೆ. ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆತರಲು ಪ್ರಯತ್ನಿಸುತ್ತಿದ್ದೇನೆ. ಅವರನ್ನು ನಮ್ಮ ಪಕ್ಷಕ್ಕೆ ಕರದುಕೊಂಡು ಬರುವಲ್ಲಿ ಯಶಸ್ವಿ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್​ಗೆ ಬರುವಂತೆ ನನ್ನನ್ನು ಡಿಕೆಶಿ ಭೇಟಿ ಮಾಡಿಲ್ಲ. ನಾನು ಮೂಲ ಬಿಜೆಪಿಗ. ನಾನು ಕಾಂಗ್ರೆಸ್​ಗೆ ಹೋಗಲ್ಲ. ಆದರೂ ಪದೇಪದೆ ನನ್ನ ಹೆಸರನ್ನು ಯಾಕೆ ತರುತ್ತಿದ್ದಾರೋ ಗೊತ್ತಿಲ್ಲ ಎಂದು ರಾಜೂಗೌಡ ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ಶಾಸಕ ಎಂ.ಪಿ. ಕುಮಾರಸ್ವಾಮಿ, ನಾನೂ ಕಾಂಗ್ರೆಸ್​​ಗೆ ಹೋಗಲ್ಲ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ನಮ್ಮ ಪಕ್ಷದಲ್ಲಿ ನಮ್ಮವರೇ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net