ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗಲ್ಲ... ರಂಭಾಪುರಿ ಜಗದ್ಗುರುಗಳ ಎದುರು ಪಶ್ಚಾತ್ತಾಪ ವ್ಯಕ್ತಪಡಿಸಿದ ಸಿದ್ದರಾಮಯ್ಯ

siddaramaiah
Published on

ಚಿಕ್ಕಮಗಳೂರು: ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ ಎಂದು ರಂಭಾಪುರಿ ಶ್ರೀಗಳ ಎದುರು ವಿಪಕ್ಷ ನಾಯಕ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.

ಮಳೆಹಾನಿ ಪ್ರದೇಶಗಳ ವೀಕ್ಷಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ನಡೆಸಿದ ಸಿದ್ದರಾಮಯ್ಯ ಶುಕ್ರವಾರ, ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೂ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಶ್ರೀಗಳ ಬಳಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ. ರಾಜ್ಯ ಮತ್ತು ಜನರ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಕೊರಳಿಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಕಾಶಿಯಿಂದ ತರಿಸಿದ ರುದ್ರಾಕ್ಷಿ ಹಾರ ಹಾಕಿ, 'ಚುನಾವಣೆವರೆಗೂ ನಿಮ್ಮ ಕೊರಳಲ್ಲಿಯೇ ಇರಲಿ' ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net