ರಂಗೇರಿದ ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ ರ‌್ಯಾಲಿಗೆ ಮಕ್ಕಳ ಬಳಕೆ

ssindagi by election
Published on

ವಿಜಯಪುರ: ಸಿಂದಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು, ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಶುಕ್ರವಾರ ಬಿಜೆಪಿ-ಕಾಂಗ್ರೆಸ್ ಭರಾಟೆ ಜೋರಾಗಿದೆ. ಕಾಂಗ್ರೆಸ್ ರ‌್ಯಾಲಿಯಲ್ಲಿ ಮಕ್ಕಳನ್ನು ಬಳಸಿಕೊಂಡದ್ದು ಕಂಡು ಬಂತು.

ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ಸಲ್ಲಿಕೆಗೆ ಸಾಥ್​ ನೀಡಲು ಹಳ್ಳಿಗಳಂದ ಕ್ರೂಸರ್, ಟಂಟಂ, ಟೆಂಪೋ ಮತ್ತಿತರ ವಾಹನಗಳಲ್ಲಿ ಕಾರ್ಯಕರ್ತರು ಆಗಮಿಸಿದರು. ಕಾಂಗ್ರೆಸ್ ಬಾವುಟ ಹಿಡಿದು ಮಕ್ಕಳೂ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದರು. ವಾಹನಗಳ ಟಾಪ್ ಮೇಲೆ ಮಕ್ಕಳು ಕುಳಿತುಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು.

ಅಶೋಕ ಮನಗೂಳಿ ಈಗಾಗಲೇ ಸಾಂಕೇತಿಕವಾಗಿ ಎರಡು ನಾಮಪತ್ರ ಸಲ್ಲಿಸಿದ್ದು, ಶುಕ್ರವಾರ ಅಧಿಕೃತವಾಗಿ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆಗಮನ ಹಿನ್ನೆಲೆ ಬೃಹತ್ ರ‌್ಯಾಲಿ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net