More

    ಸಂಸದರ ಕಚೇರಿ ಮುಂದೆ ಧರಣಿ

    ಕೋಲಾರ: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ. 23ರಂದು ಬೆಳಗ್ಗೆ 10ಕ್ಕೆ ನಗರದ ಸಂಸದ ಎಸ್​.ಮುನಿಸ್ವಾಮಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಅಂಗನವಾಡಿ ಕಾರ್ಯಕರ್ತರು ತಾಲೂಕಿನಲ್ಲಿ ಗ್ರಾ.ಪಂ ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರಚಾರ ನಡೆಸಿದರು.

    ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳು ಶಾಶ್ವತವಾಗಿಯೇ ಉಳಿದುಕೊಂಡಿವೆ. ಆಗಾಗಿ ದೇಶಾದ್ಯಂತ ಸಂಸದರ ಕಚೇರಿ ಎದುರು ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಪಾಲ್ಗೊಳ್ಳುವ ಮೂಲಕ ಯಶಸ್ಸುಗೊಳಿಸಬೇಕು ಎಂದು ಮನವಿ ಮಾಡಿದರು.
    ಅಂಗನವಾಡಿ ನೌಕರರು 49 ವರ್ಷಗಳಿಂದ ಸರ್ಕಾರಿ ನೌಕರರಾಗಿ ದುಡಿಯುತಿದ್ದರೂ ಕನಿಷ್ಠ ವೇತನ, ಪಿಎಫ್​, ಇಎಸ್​ಐ ಸೇರಿದಂತೆ ಯಾವುದೇ ಸೌಲಭ್ಯಗಳಿಂದ ವಂಚನೆಗೆ ಒಳಗಾಗಿದ್ದಾರೆ. ನಿವೃತ್ತಿ ನಂತರದ ಪಿಂಚಣಿ ಸಿಗುತ್ತಿಲ್ಲ. ದೇಶದಲ್ಲಿ 14 ಲಕ್ಷ ಅಂಗನವಾಡಿಗಳಿದ್ದು, ಇವುಗಳಲ್ಲಿ 28 ಲಕ್ಷ ಕಾರ್ಯಕರ್ತರು ಹಾಗೂ ಸಹಾಯಕಿಯರು ದುಡಿಯುತ್ತಿದ್ದಾರೆ. 11 ಕೋಟಿಯಷ್ಟು ಮಕ್ಕಳು ಅಂಗನವಾಡಿಯಲ್ಲಿದ್ದಾರೆ. ಇದರೊಂದಿಗೆ ಎಂಟು ಕೋಟಿ ಗರ್ಭಿಣಿ ಹಾಗೂ ಬಾಣಂತಿಯರು ಅಂಗನವಾಡಿಯಿಂದ ವಿವಿಧ ಸೌಲಭ್ಯ ಪಡೆಯುತಿದ್ದಾರೆ. ಇಷ್ಟೆಲ್ಲ ಇದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಅವರಿಗೆ ಸೌಲಭ್ಯಗಳನ್ನು ನೀಡಲು ಹಿಂದೇಟು ಹಾಕುತ್ತಿದೆ ಎಂದರು.
    ಕಾರ್ಯದರ್ಶಿ ಮಂಜುಳಾ ಮಾತನಾಡಿ, ವೇತನದ ಜತೆಗೆ ಗೌರವಧನ ನೀಡುತ್ತಿದೆ. ಎಲ್ಲ ಕೆಲಸಗಳನ್ನು ನಮ್ಮಿಂದ ಮಾಡಿಸಿಕೊಳ್ಳುವ ಸರ್ಕಾರ, ಸರ್ಕಾರಿ ನೌಕರರನ್ನಾಗಿ ನಮ್ಮನ್ನು ಪರಿಗಣಿಸುತ್ತಿಲ್ಲ. ಇಲಾಖೇತರ ಕೆಲಸಗಳಾದ ಬಿಎಲ್​ಓ ಸರ್ವೇ, ಐಸಿಡಿಎಸ್​ ಯೋಜನೇತರ ಕೆಲಸಗಳಿಗೆಲ್ಲ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. ನೌಕರರಿಗೆ 31 ಸಾವಿರ ರೂಪಾಯಿ ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts