More

    ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಕರಿದ್ದ ನೇಪಾಳ ವಿಮಾನ ನಾಪತ್ತೆ!

    ನವದೆಹಲಿ: ನೇಪಾಳದಲ್ಲಿ ಪ್ರಯಾಣಿಕ ವಿಮಾನ ನಾಪತ್ತೆಯಾಗಿದ್ದು, ಇದರಲ್ಲಿ ಭಾರತೀಯರು ಸೇರಿ 22 ಪ್ರಯಾಣಿಕರು ಇದ್ದರು ಎಂದು ವರದಿಯಾಗಿದೆ.

    ತಾರಾ ಏರ್​ 9ಎನ್​​ಎಇಟಿ ಎರಡು ಇಂಜಿನ್​​ವುಳ್ಳ ಖಾಸಗಿ ವಿಮಾನ ಭಾನುವಾರ ಬೆಳಗ್ಗೆ ಕಣ್ಮರೆಯಾಗಿದೆ. ಪೋಖ್ರಾದಿಂದ ಹಾರಾಟ ನಡೆಸಿದ್ದ ವಿಮಾನ ಬೆಳಗ್ಗೆ 9.55ಕ್ಕೆ ಸಂಪರ್ಕ ಕಡಿತಗೊಂಡಿದೆ. ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ಜೊಮ್ಸನ್​​ ನಗರದ ಬಳಿ ಹಾರಾಟ ನಡೆಸುವ ವೇಳೆ ವಿಮಾನ ನಾಪತ್ತೆಯಾಗಿದೆ.

    ವಿಮಾನವು ಮುಸ್ತಾಂಗ್​​ ಜಿಲ್ಲೆಯಲ್ಲಿ ಹಾರಾಟ ನಡೆಸಿದ್ದು ಕಾಣಿಸಿಕೊಂಡ ಬಳಿಕ ಧೌಲಗಿರಿ ಪರ್ವತದತ್ತ ಹಾರಿದ ಬಳಿಕ ಕಣ್ಮರೆಯಾಗಿದೆ. ಅದೇ ಸಂದರ್ಭದಲ್ಲಿ ಸಂಪರ್ಕ ಕಡಿತಗೊಂಡಿದೆ ಎಂದು ಜಿಲ್ಲಾಧಿಕಾರಿ ನೇತ್ರಾ ಪ್ರಸಾದ್​​ ತಿಳಿಸಿದ್ದಾರೆ.

    22 ಪ್ರಯಾಣಿಕರಿದ್ದ ಸಣ್ಣ ವಿಮಾನ ಇದಾಗಿದ್ದು, ನಾಲ್ವರು ಭಾರತೀಯರು, ಮೂವರು ಜಪಾನ್​ ದೇಶದ ಪ್ರಜೆಗಳು ಸೇರಿ ಒಟ್ಟು 22 ಮಂದಿ ಇದ್ದರು ಎಂದು ವರದಿಯಾಗಿದೆ.

    ಬೆಟ್ಟಗುಡ್ಡದಲ್ಲಿ ವಿಮಾನ ಉರುಳಿರಬಹುದು ಎಂದು ಶಂಕಿಸಲಾಗಿದ್ದು, ಹುಡುಕಾಟ ಆರಂಭಿಸಲಾಗಿದೆ. (ಏಜೆನ್ಸೀಸ್​)

    ಹಾಟ್​​ ಫೋಟೋ ತೆಗೆಸಿದ ವೈದ್ಯೆಗೆ ಭಾರೀ ಸಂಕಷ್ಟ! ತನ್ನ ಜೀವನದಲ್ಲಿ ಹೀಗಾಗುತ್ತೆ ಎಂದು ಕನಸಲ್ಲೂ ಎಣಿಸಿರಲಿಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts