More

    ನೈಋತ್ಯ ಗೆಲುವಿಗೆ ವಿಶೇಷ ಕಾರ್ಯತಂತ್ರ

    ಶಿವಮೊಗ್ಗ: ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿಕೂಟ ಗೆಲುವು ಸಾಧಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯತಂತ್ರ ರೂಪಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು ಎಂದು ಬಿಜೆಪಿ ವಿವಿಧ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಹೇಳಿದರು.

    ಮೇ 26ರಿಂದ 28ರವರೆಗೆ ಬಿ.ವೈ.ವಿಜಯೇಂದ್ರ ಹಾಗೂ ಜೂ.1ರಂದು ಯಡಿಯೂರಪ್ಪ ಕ್ಷೇತ್ರ ಪ್ರವಾಸ ಮಾಡುವರು. ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ 15 ಸಾವಿರ ಮತಗಳ ಅಂತರದ ಗೆಲುವು ದಾಖಲಿಸಲಿದ್ದಾರೆ. ಶಿಕ್ಷಕರ ಕ್ಷೇತ್ರದಿಂದ ಬೋಜೇಗೌಡ ಗೆಲುವು ನಿಶ್ಚಿತ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
    ಈವರೆಗೂ ನಡೆದ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಶಿಕ್ಷಕರ ಕ್ಷೇತ್ರದಲ್ಲಿ ನಾಲ್ಕು ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಡಾ. ಸರ್ಜಿ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಈ ಕಾರಣದಿಂದ ಅವರಿಗೆ ಟಿಕೆಟ್ ಸಿಕ್ಕಿದೆ ಎಂದರು.
    ಪದವೀಧರ ಕ್ಷೇತ್ರದಲ್ಲಿ ಪ್ರತಿ 20 ಮತದಾರರಿಗೆ ಒಬ್ಬರಂತೆ ಬಿಜೆಪಿಯಿಂದ ಘಟನಾಯಕರನ್ನು ನೇಮಕ ಮಾಡಲಾಗಿದೆ. ಅವರು ಪ್ರತಿ ಮತದಾರರನ್ನು ಭೇಟಿ ಮಾಡಿ ಮನವೊಲಿಸುತ್ತಿದ್ದಾರೆ. ಮತಗಟ್ಟೆಗೆ ಮತದಾರರನ್ನು ಕರೆತರುವುದರಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.
    ಪ್ರಮುಖರಾದ ರತ್ನಾಕರ ಶೆಣೈ, ಬಿ.ಆರ್.ಮಧುಸೂದನ್, ಸುರೇಖಾ ಮುರಳೀಧರ್, ಪದ್ಮಿನಿ ರಾವ್, ಸುಧೀಂದ್ರ ಕಟ್ಟೆ, ಹೃಷಿಕೇಶ್ ಪೈ, ಕೆ.ವಿ.ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts