More

    ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಬಾಗಲಕೋಟೆ: ಗುಳೇದಗುಡ್ಡ ಪಟ್ಟಣದ ಮರಡಿಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್​ ಸ್ವಾಮೀಜಿ ಮತ್ತು ಕಾರಿನಲ್ಲಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ ಹಾಗೂ ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾರಿನಲ್ಲಿ ಸ್ವಾಮೀಜಿ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ.

    ಮಂಡ್ಯದಲ್ಲಿ ಬ್ರಹ್ಮಚಾರಿಗಳ ಪಾದಯಾತ್ರೆ: ಎಂಗೇಜ್ಮೆಂಟ್ ಆದವರಿಗೂ ಅವಕಾಶವಿಲ್ಲ!

    ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts