More

    ಶ್ರೀಲಂಕಾದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು: ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

    ಕೊಲಂಬೊ: ಶ್ರೀಲಂಕಾ ದೇಶದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಸಚಿವ ಪ್ರೊ.ಚನ್ನ ಜಯಸುಮನ ಕೂಡ ತನ್ನ ರಾಜೀನಾಮೆ ಪತ್ರ ಹಸ್ತಾಂತರಿಸಿದ್ದಾರೆ.

    ಶ್ರೀಲಂಕಾದಲ್ಲಿ ಕೆಲ ತಿಂಗಳಿಂದ ಆರ್ಥಿಕ ಬಿಕ್ಕಟ್ಟು ಬಿಗಡಾಯಿಸಿದ್ದು, ಸರ್ಕಾರದ ವಿರುದ್ಧ ಜನತೆಯ ಆಕ್ರೋಶ ಭುಗಿಲೆದ್ದಿತ್ತು. ರಾಜೀನಾಮಗೆ ಆಗ್ರಹಿಸಿ ಉಗ್ರ ಹೋರಾಟ ನಡೆದಾಗಲೂ ರಾಜೀನಾಮೆಯ ಕರೆಗಳನ್ನು ಧಿಕ್ಕರಿಸಿದ್ದರು. ಒಂದೇ ತಿಂಗಳಲ್ಲಿ ಎರಡು ಭಾರಿ ತುರ್ತಪರಿಸ್ಥಿತಿಯನ್ನೂ ಹೇರಲಾಗಿತ್ತು. ಇದೀಗ ‘ಜನರಿಗಾಗಿ ಯಾವುದೇ ರೀತಿಯ ತ್ಯಾಗ ಮಾಡಲು ಸಿದ್ಧ’ ಎಂದು ತನ್ನ ಬೆಂಬಲಿಗರಿಗೆ ಹೇಳಿರುವ ಮಹಿಂದಾ ರಾಜಪಕ್ಷ, ಕೊನೆಗೂ ರಾಜೀನಾಮೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರ ಬೆನ್ನಲ್ಲೇ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

    ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಪರಿಣಾಮ ಬಡವರು ಮತ್ತು ಜನಸಾಮಾನ್ಯರ ಬದುಕು ಅತ್ಯಂತ ಶೋಚನೀಯವಾಗಿದೆ. ಜೀವನಾವಶ್ಯಕ ಸಾಮಗ್ರಿ ಬೆಲೆ ಅಕ್ಷರಶಃ ಗಗನಕ್ಕೇರಿದ್ದು, ಒಂದು ಕೆಜಿ ಅಕ್ಕಿಯ ಬೆಲೆಯೇ 200 ರೂಪಾಯಿ ದಾಟಿದೆ.

    ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

    ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts