More

    ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರೇಶ್‌ ಕುಮಾರ್ ಘೋಷಣೆ

    ಬೆಂಗಳೂರು: ಕರೊನಾ ಹಿನ್ನೆಲೆ ಮುಂದೂಡಲ್ಪಟಿದ್ದ ಹತ್ತನೇ ತರಗತಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ತಿಳಿಸಿದ್ದಾರೆ.

    ಎಸ್ಸೆಸ್ಸೆಲ್ಸಿ ಪರೀಕ್ಷೆ ಮತ್ತು ಶಾಲಾ ಆರಂಭ ಕುರಿತು ಸೋಮವಾರ ನಡೆದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಸುರೇಶ್​ ಕುಮಾರ್​, ಕಳೆದ ವರ್ಷ ಅತ್ಯಂತ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಿದ್ದೇವೆ. ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಅನೇಕ ಕಡೆಗಳಲ್ಲಿ ನಾನು ಕೇಳಿದ್ದೆ. ಅದಕ್ಕೆ ಅವರು ಪರೀಕ್ಷೆ ಬೇಕು. ಹಾಗೆ ಪಾಸ್ ಮಾಡಿದ್ರೆ ತಮ್ಮನ್ನೂ ಕರೊನಾ ಬ್ಯಾಚ್ ಅಂತಾರೆ ಅಂತಾ ಹೇಳಿದ್ರು. ಹಾಗಾಗಿ ಈ ಭಾರಿ ಪರೀಕ್ಷೆ ನಡೆಸುತ್ತೇವೆ. ಕಳೆದ ಬಾರಿ 4 ದಿನ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ 2 ದಿನ ಪರೀಕ್ಷೆ ನಡೆಯುತ್ತೆ ಎಂದರು.

    ಜುಲೈ 19ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಭಾಷಾ ವಿಯಷಗಳ ಪರೀಕ್ಷೆ ನಡೆಯಲಿದೆ. ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಎಕ್ಸಾಂ ನಡೆಯಲಿದ್ದು, ಒಎಂಆರ್ ಶೀಟ್ ನೀಡಲಾಗುತ್ತದೆ. ಸಮಾಜವಿಜ್ಞಾನ, ವಿಜ್ಞಾನ ಹಾಗೂ ಗಣಿತದ ಒಂದು ಪತ್ರಿಕೆ ಹಾಗೂ ಕನ್ನಡ ಹಿಂದಿ‌‌ ಇಂಗ್ಲೀಷ್ ಸೇರಿ‌ ಒಂದು ಪರೀಕ್ಷೆ ನಡೆಯಲಿದೆ. 8.76 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 73,066 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಾಳೆ ಪ್ರವೇಶ ಪತ್ರ ಪ್ರಕಟಿಸುತ್ತೇವೆ. ನೀಡುತ್ತೇವೆ. ಜೂ.30ರಂದು ಡೌನ್​ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ‌ ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಚರ್ಚಿಸಲಾಗಿದೆ ಎಂದು ಸುರೇಶ್​ ಕುಮಾರ್​ ತಿಳಿಸಿದರು.

    ಕಳೆದ ಬಾರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿ ವಿಶೇಷ ಪರಿಸ್ಥಿತಿ ಮಧ್ಯೆ ಪರೀಕ್ಷೆ ನಡೆಸಲಾಗುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿದೆ. ಆರೋಗ್ಯ ಇಲಾಖೆಯ ಆಧಿಕಾರಿಗಳ ಸಲಹೆ ಪಡೆಯಲಾಗಿದೆ.‌ ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ‌ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು.

    ಸಿಗಂದೂರು ಲಾಂಚ್​ನಿಂದ ನದಿಗೆ ಹಾರಿದ ಮಹಿಳೆ! ಸಾಯಲೆಂದೇ ಬಂದವಳ ಜೀವ ಉಳಿದಿದ್ದೇಗೆ?

    ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts