More

    ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ! ಇಂಥಾ ಸ್ಥಿತಿ ಯಾರಿಗೂ ಬೇಡ…

    ಇಸ್ಲಾಮಾಬಾದ್​: ಹೆರಿಗೆ ನೋವಿನಲ್ಲಿ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಲು ಹೋಗಿ ಮಗುವಿನ ತಲೆಯನ್ನೇ ಕತ್ತರಿಸಿ ಆಕೆಯ ಗರ್ಭದಲ್ಲೇ ಬಿಟ್ಟಿದ್ದ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಸರ್ಕಾರ ಸೂಚಿಸಿದೆ.

    ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದ ಸಿಬ್ಬಂದಿಯ ಯಡವಟ್ಟಿನಿಂದ ಮಗು ಮೃತಪಟ್ಟಿದ್ದು, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ತಾರ್ಪಾರ್ಕರ್ ಜಿಲ್ಲೆಯ 32 ವರ್ಷದ ಹಿಂದೂ ಮಹಿಳೆಯೊಬ್ಬರು ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ತಾನು ವಾಸವಿದ್ದ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು. ಅಲ್ಲಿ ಸ್ತ್ರೀರೋಗ ತಜ್ಞರು ಇರಲಿಲ್ಲ. ಆಸ್ಪತ್ರೆಉ ಸಿಬ್ಬಂದಿಯೇ ಹೆರಿಗೆ ಮಾಡಿಸಲು ಹೋಗಿ, ಶಿಶುವಿನ ತಲೆಯನ್ನೇ ಕತ್ತರಿಸಿದ್ದಾರೆ. ಆ ಮೂಲಕ ಮಗುವಿನ ಸಾವಿಗೂ ಕಾರಣವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ, ಶಿಶುವಿನ ತಲೆ ಗರ್ಭದಲ್ಲೇ ಇದ್ದ ಕಾರಣ ತೀವ್ರ ಹೊಟ್ಟೆನೋವು ಮತ್ತು ರಕ್ತಸ್ರಾವವಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮಹಿಳೆಯನ್ನ ಕುಟುಂಬಸ್ಥರು ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರು. ಹೆಚ್ಚಿನ ಚಿಕಿತ್ಸೆಗಾಗಿ ಜಮ್ಶೊರೊದಲ್ಲಿರುವ LUMHS(ಲಿಯಾಕತ್ ಯೂನಿವರ್ಸಿಟಿ ಆಫ್ ಮೆಡಿಕಲ್ ಆ್ಯಂಡ್ ಹೆಲ್ತ್ ಸೈನ್ಸ್​)ಗೆ ದಾಖಲಿಸಿದರು.

    LUMHSನ ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ರಾಹೀಲ್ ಸಿಕಂದರ್ ನೇತೃತ್ವದ ತಂಡ, ಕೂಡಲೇ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿ ಗರ್ಭದಲ್ಲಿದ್ದ ಶಿಶುವಿನ ದೇಹವನ್ನ ಹೊರತೆಗೆದು ಆಕೆಯ ಜೀವ ಉಳಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಂಧ್​​ ರಾಜ್ಯ ಸರ್ಕಾರ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ವೇಳೆ ಏನೆಲ್ಲಾ ಆಯಿತು? ನಿರ್ಲಕ್ಷ್ಯ ಯಾರದ್ದು? ಎಂಬುದರ ಬಗ್ಗೆ ತನಿಕೆ ನಡೆಸಲು ಸಮಿತಿ ರಚಿಸಿದೆ. ಅಂದಹಾಗೆ ಈ ದುರ್ಘಟನೆ ಸಂಭವಿಸಿರೋದು ಜೂ.19ರಂದು.

    ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

    ಬೆಳಗಾವಿಯಲ್ಲಿ ತ್ರಿವಳಿ ಕೊಲೆ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ‌ಪ್ರವೀಣ್ ಭಟ್​ನನ್ನು ನಿರ್ದೋಷಿ ಎಂದ ಧಾರವಾಡ ಹೈಕೋರ್ಟ್

    ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

    ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts