More

    ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗದ ಪೊಲೀಸ್ ಅಧಿಕಾರಿಗಳು; ಹೊರಬಿತ್ತು ಕಟ್ಟುನಿಟ್ಟಿನ ಆದೇಶ

    ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗುತ್ತಿಲ್ಲ ಹಾಗೂ ಪೊಲೀಸ್ ಠಾಣೆಗಳಲ್ಲಿಯೂ ಠಾಣಾಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ ಮತ್ತು ಹಿರಿಯ ಅಧಿಕಾರಿಗಳ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂಬ ವಿಷಯವನ್ನು ಇಲಾಖೆ ಇದೀಗ ಗಂಭೀರವಾಗಿ ತೆಗೆದುಕೊಂಡಿದ್ದು, ಕಟ್ಟುನಿಟ್ಟಿನ ಆದೇಶವೊಂದನ್ನು ಹೊರಡಿಸಿದೆ.

    ಸಾಕಷ್ಟು ಮಂದಿ ಘಟಕಾಧಿಕಾರಿಗಳು 12 ಗಂಟೆಯಾದರೂ ಕಚೇರಿಗೆ ಹಾಜರಾಗದಿರುವುದು ಗಮನಕ್ಕೆ ಬಂದಿರುತ್ತದೆ. ಇದು ಗಂಭೀರವಾದ ವಿಷಯ. ಮಧ್ಯಾಹ್ನದ ನಂತರ ಸಹ ಕಚೇರಿಗೆ ಹಾಜರಾಗುತ್ತಿಲ್ಲ, ಸಾರ್ವಜನಿಕರ ಕೊಂದುಕೊರತೆಗಳಿಗೂ ಸ್ಪಂದಿಸುತ್ತಿಲ್ಲ. ಅಧಿಕಾರಿಗಳ ಸಂಪರ್ಕಕ್ಕೂ ಸಿಗುತ್ತಿಲ್ಲ, ಇದರಿಂದ ಕಾರ್ಯನಿರ್ವಹಣೆಗೆ ತೊಂದರೆ ಆಗುತ್ತಿದೆ. ರಾಜ್ಯದ ಪೊಲೀಸ್ ಠಾಣೆಗಳಲ್ಲಿಯೂ ಠಾಣಾಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಲಭ್ಯವಿಲ್ಲದಿರುವುದು ಶೋಚನೀಯ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

    ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗಣ್ಯವ್ಯಕ್ತಿಗಳ ಕಾರ್ಯಕ್ರಮ, ಪ್ರಮುಖವಾದ ಬಂದೋಬಸ್ತ್ ಕಾರ್ಯ ಮತ್ತು ತುರ್ತು ಸಂದರ್ಭಗಳ ಕಾರ್ಯಗಳನ್ನು ಹೊರತು ಪಡಿಸಿ, ಉಳಿದೆಲ್ಲ ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಬಂದು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಬೇಕು. ಕಚೇರಿಯ ಕಾರ್ಯವನ್ನು ಸುಗಮವಾಗಿ ನಿರ್ವಹಿಸುವ ಬಗ್ಗೆ ಗಮನಹರಿಸುವುದು ಹಾಗೂ ಮೇಲಧಿಕಾರಿಗಳ ಸಂಪರ್ಕಕ್ಕೆ ಲಭ್ಯವಾಗುವಂತೆ ಕಾರ್ಯನಿರ್ವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ. ಹಾಗೆಯೇ ಠಾಣಾಧಿಕಾರಿಗಳು ಸಂಜೆ 5 ರಿಂದ 6 ಗಂಟೆಯ ಅವಧಿಯನ್ನು ವಿಶೇಷವಾಗಿ ಸಾರ್ವಜನಿಕರ ಸಂದರ್ಶನಕ್ಕಾಗಿ ಮೀಸಲಿಟ್ಟು ಪಾಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗದ ಪೊಲೀಸ್ ಅಧಿಕಾರಿಗಳು; ಹೊರಬಿತ್ತು ಕಟ್ಟುನಿಟ್ಟಿನ ಆದೇಶ

    ಮೆಡಿಕಲ್ಸ್ ಮುಂಭಾಗ ಎದೆ ಹಿಡಿದುಕೊಂಡೇ ಪ್ರಾಣ ಬಿಟ್ಟ; ಔಷಧ ಪಡೆದು ಹಣ ನೀಡುವಾಗಲೇ ಹೃದಯಾಘಾತ!

    ಸ್ಮಶಾನದ ಹಾದಿಯಲ್ಲಿ ಕಣ್ಣು ತೆರೆದ ‘ಶವ’!; ಮಹಿಳೆ ಮೃತಪಟ್ಟಳು ಎಂದು ವೈದ್ಯರು ದೃಢೀಕರಿಸಿದ್ದರೂ ಸಂಭವಿಸಿದ ಅಚ್ಚರಿ!

    ಮದುವೆ ಆಗಿಲ್ಲ ಅಂದ್ರೆ ಮನೆ ಖಾಲಿ ಮಾಡಿ: ಬಾಡಿಗೆದಾರರಿಗೆ ವಿಚಿತ್ರ ಎಚ್ಚರಿಕೆ

    ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts