More

    ಸತ್ವ ಕಳೆದುಕೊಳ್ಳುತ್ತಿರುವ ಹೋರಾಟ

    ಕೆ.ಎಂ.ದೊಡ್ಡಿ: ರೈತ ಹೋರಾಟಗಾರ ಜಿ.ಮಾದೇಗೌಡ ನಿಧನದ ನಂತರ ಹೋರಾಟಗಳು ಸತ್ವ ಕಳೆದುಕೊಳ್ಳುತ್ತಿವೆ ಎಂದು ಮಾಜಿ ಶಾಸಕಿ ಬಿ.ಮಲ್ಲಾಜಮ್ಮ ಅಸಮಾಧಾನ ವ್ಯಕ್ತಪಡಿಸಿದರು.

    ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರನ್ನು ಭಾರತೀ ಎಜುಕೇಷನ್ ಟ್ರಸ್ಟ್‌ನ ಆಡಳಿತ ಕಚೇರಿಯಲ್ಲಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಾಮಾನದ ಕುರಿತು ಚರ್ಚೆ ನಡೆಸಿದ ಬಳಿಕ ಅಭಿನಂದನೆ ಸ್ವೀಕರಿಸಿ ಸುದ್ದಿಗಾರೊಂದಿಗೆ ಮಾತನಾಡಿದರು.

    ಜಿಲ್ಲೆಯ ಹಿರಿಯ ಮುತ್ಸದ್ಧಿಗಳಾದ ಕೆ.ವಿ.ಶಂಕರಗೌಡ, ಜಿ.ಮಾದೇಗೌಡ, ಎಚ್.ಕೆ.ವೀರಣ್ಣಗೌಡ, ಎಸ್.ಎಂ.ಕೃಷ್ಣ, ಚೌಡಯ್ಯ ಸೇರಿದಂತೆ ಹಲವಾರು ರಾಜಕಾರಣಿಗಳು ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ತಮ್ಮದೇ ಶೈಲಿಯಲ್ಲಿ ರಾಜಕಾರಣ ಮಾಡುತ್ತಿದ್ದರು. ಅಲ್ಲದೆ ಗೌಡರು ಹೋರಾಟ ನಡೆಸಿ ರೈತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಯಶಸ್ವಿಯಾಗುತ್ತಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಹೋರಾಟ ದಿಕ್ಕು ತಪ್ಪುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

    ಮಾದೇಗೌಡದೊಂದಿಗೆ ಒಡನಾಟ ಇದ್ದ ಕಾರಣ ಅವರ ಪುತ್ರನನ್ನು ನೋಡಲು ಬಂದಿದ್ದೇನೆ. ಮಧು ಜಿ.ಮಾದೇಗೌಡರು ಮತ್ತು ಬಿಇಟಿ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಅವರೊಂದಿಗೆ ಭಾವನಾತ್ಮಕ ಸಂಬಂಧವಿದ್ದು, ಪ್ರಸ್ತುತ ರಾಜಕೀಯ ವಿಚಾರ ಚರ್ಚಿಸಿದ್ದೇನೆ ಎಂದರು.

    ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಎಂ.ನಂಜೇಗೌಡ, ಕಾವೇರಿ ನೀರಾವರಿ ನಿಗಮದ ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಬಸವರಾಜೇಗೌಡ, ತಾಪಂ ಮಾಜಿ ಸದಸ್ಯರಾದ ಬಿ.ಗಿರೀಶ್, ಕಾಡುಕೊತ್ತನಹಳ್ಳಿ ಕೆಂಪರಾಜು, ಮುಖಮಡರಾದ ಆರ್.ಸಿದ್ದಪ್ಪ, ಕಾರ್ಕಹಳ್ಳಿ ಸ್ವರೂಪ್ ಚಂದ್ರ, ವಿನಯ್ ಹೊನ್ನೇಗೌಡ, ಹಾಗಲಹಳ್ಳಿ ಪುಟ್ಟಸ್ವಾಮಿಗೌಡ, ಮಣಿಗೆರೆ ಕೆ. ಕಬ್ಬಾಳಯ್ಯ, ಚಂದೂಪುರ ಪ್ರಭು, ಬೊಪ್ಪಸಮುದ್ರ ಶ್ರೀಕಂಠ ಹಲವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts