

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಏಳನೇ ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಯಿಶಾ ಬಿ.ಆರ್. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಈಕೆ ಇಂದು ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನ ಏಳನೇ ಮಹಡಿಯಿಂದ ಹಾರಿ ಸೂಸೈಡ್ ಮಾಡಿಕೊಂಡಿದ್ದಾಳೆ.
ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿನಿ,ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.