ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

A student lost his life because he failed in the first PUC exam
Published on

ಹಾವೇರಿ: ಪ್ರಥಮ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ.

ವಿನಾಯಕ ತಳವಾರ (17) ಮೃತ ವಿದ್ಯಾರ್ಥಿ.ಈತ ಮೃತ ಹಾವೇರಿ ನಗರದ ಹೊಸಮಠ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದ. ಎರಡು ವಿಷಯಗಳಲ್ಲಿ ಅನುತ್ತೀರ್ಣ ಆಗಿದ್ದರಿಂದ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಜಿಗುಪ್ಸೆಯಾಗಿ ತನ್ನ ವಾಸದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net