ಬ್ಲೂ ವೇಲ್‌ ಚಾಲೆಂಜ್‌..ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಬಲಿ!

blue wale
Published on

ವಾಷಿಂಗ್ಟನ್: ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಇದೀಗ ವಿದ್ಯಾರ್ಥಿ ಬ್ಲೂ ವೇಲ್‌ ಚಾಲೆಂಜ್‌ ಗೆ ಬಲಿಯಾಗಿದ್ದಾನೆ ಎನ್ನಲಾಗುತ್ತಿದೆ.

ಮೃತಪಟ್ಟ ವಿದ್ಯಾರ್ಥಿ ಮ್ಯಾಸಚೂಸೆಟ್ಸ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಮಾರ್ಚ್ 8 ರಂದು ಶವವಾಗಿ ಪತ್ತೆಯಾಗಿದ್ದ.

ವಿದ್ಯಾರ್ಥಿ ಸಾವು ಕೊಲೆ ಎಂದು ವರದಿಯಾಗಿದ್ದು, ಅದರಲ್ಲಿ ಆತ ಬೋಸ್ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿದ್ದ ಎಂದು ತಪ್ಪಾಗಿ ಗುರುತಿಸಲಾಗಿದೆ. ವಿದ್ಯಾರ್ಥಿ ದರೋಡೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಜೊತೆಗೆ ಆತ ಕಾಡಿನಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದ.

ಇನ್ನು ಮೃತ ವಿದ್ಯಾರ್ಥಿ ಆನ್‌ಲೈನ್‌ ಆಟ ಬ್ಲೂವೇಲ್ ಅನ್ನು ಹೆಚ್ಚಾಗಿ ಆಡುತ್ತಿದ್ದ. ಆಟದ ಭಾಗವಾಗಿ ವಿದ್ಯಾರ್ಥಿ 2 ನಿಮಿಷಗಳ ಕಾಲ ಉಸಿರನ್ನು ಬಿಗಿಹಿಡಿದುಕೊಂಡಿದ್ದ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net