ವಿಜಯವಾಣಿ ಸುದ್ದಿಜಾಲ ಕುಂದಾಪುರ
ರಾಜಕೀಯ ನಾಯಕ ಮಾಣಿ ಗೋಪಾಲ್ ಚುನಾವಣೆಯಲ್ಲಿ ಗೆದ್ದಿದ್ದರೆ ಉತ್ತಮ ಸಂಸದೀಯ ಪಟುವಾಗುತ್ತಿದ್ದರು. ಅವರ ವಿಷಯ ಸಂಗ್ರಹ, ಭಾಷಣ ಪಟುತ್ವ, ಅನುಭವದ ಮಾತುಗಳಿಂದ ಜನರ ಕೆಲಸಕ್ಕೆ ಸ್ಪಂದಿಸುವ ಶಕ್ತಿ ಇದ್ದ ಅವರು ಚುನಾವಣೆ ಗೆಲ್ಲದೇ ಜನನಾಯಕರಾದರು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ವತಿಯಿಂದ ಹಿರಿಯರೆಡೆಗೆ ಕಸಾಪ ನಡಿಗೆ ಎಂಬ ಕಾರ್ಯಕ್ರಮದನ್ವಯ ಹಿರಿಯ ರಾಜಕೀಯ ಮುತ್ಸದ್ಧಿ ಮಾಣಿ ಗೋಪಾಲರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನರ ಮಧ್ಯೆ ಪ್ರೀತಿ, ವಿಶ್ವಾಸ ಉಳಿಸಿಕೊಂಡ ಬೆರಳೆಣಿಕೆಯ ರಾಜಕಾರಣಿಗಳ ಪೈಕಿ ಒಬ್ಬರು. ಸಕ್ರಿಯ ರಾಜಕಾರಣದಲ್ಲಿ ಪ್ರವಾಹದ ವಿರುದ್ಧ ಈಜಿದವರು ಎಂದರು.
ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ನಮ್ಮ ಕುಟುಂಬದ ನಡುವೆ 50 ವರ್ಷಗಳಿಂದ ತಂದೆಯ ಕಾಲದಿಂದಲೂ ಸ್ನೇಹ ಅವರಿಗಿದೆ. ಭೂಮಸೂದೆ ಮೊದಲಾದ ಹೋರಾಟಗಳಿಂದಾಗಿ ಡಿ.ದೇವರಾಜ ಅರಸು ಪ್ರಶಸ್ತಿ ಸಲ್ಲಬೇಕು ಎಂದರು.
ಕಸಾಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಉಡುಪಿ ಜಿಲ್ಲೆ ಸ್ಥಾಪಕಾಧ್ಯಕ್ಷ ಎ.ಎಸ್.ಎನ್.ಹೆಬ್ಬಾರ್ ಶುಭ ಹಾರೈಸಿದರು. ಮಾಣಿ ಗೋಪಾಲ್ ಅವರನ್ನು ಗೌರವಿಸಲಾಯಿತು.
ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ್ ಶೆಣೈ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ತಾಲೂಕು ಗೌರವ ಕಾರ್ಯದರ್ಶಿ ಅಕ್ಷತಾ ಗಿರೀಶ್, ಕಸಾಪ ತಾಲೂಕು ಕೋಶಾಧ್ಯಕ್ಷ ಕೆ.ಎಸ್.ಮಂಜುನಾಥ, ಕಾಂಗ್ರೆಸ್ ಮುಖಂಡರಾದ ಎಂ.ದಿನೇಶ ಹೆಗ್ಡೆ ಮೊಳಹಳ್ಳಿ, ಚಂದ್ರಶೇಖರ ಶೆಟ್ಟಿ, ಕೆ.ವಿಕಾಸ್ ಹೆಗ್ಡೆ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ನಾರಾಯಣ ನಾಯಕ್ ನೇರಳಕಟ್ಟೆ, ಗೋಪಾಲ ಶೆಟ್ಟಿ, ಜೆಸಿಐ ಸಿಟಿ ಮಾಜಿ ಅಧ್ಯಕ್ಷ ಡಾ.ಸೋನಿ ಡಿಕೋಸ್ಟಾ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ದ.ಕ. ಜಿಲ್ಲಾ ಬಿಜೆಪಿ ಪ್ರಭಾರಿ ರಾಜೇಶ ಕಾವೇರಿ, ಚಿತ್ರ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ, ವಕೀಲ ಟಿ.ಬಿ.ಶೆಟ್ಟಿ ಮೊದಲಾದವರಿದ್ದರು.
ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು. ಕಸಾಪ ಕಾರ್ಕಳ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಂಕು ತಿಮ್ಮನ ಕಗ್ಗದ ವಚನ ಹೇಳಿದರು. ಕಸಾಪ ಕುಂದಾಪುರ ತಾಲೂಕು ಘಟಕ ಗೌರವ ಕಾರ್ಯದರ್ಶಿ ದಿನಕರ ಆರ್.ಶೆಟ್ಟಿ ನಿರ್ವಹಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ವಂದಿಸಿದರು.