ಮೈಸೂರು ರಸ್ತೆ ಬಂದ್​ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಯತ್ನ: ಮಂಡ್ಯದಲ್ಲಿ ರೈತರನ್ನ ವಶಕ್ಕೆ ಪಡೆದ ಪೊಲೀಸರು

farmers-union-protest mandya
Published on

ಮಂಡ್ಯ: ಪ್ರತಿ ಟನ್ ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವಂತೆ ಹಾಗೂ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು-ಮೈಸೂರು, ಕುಣಿಗಲ್​-ಮೈಸೂರು ರಸ್ತೆ ಬಂದ್​ ಮಾಡಿ ನಗರದ ವಿವಿಧೆಡೆ ರೈತ ಸಂಘ ಪ್ರತಿಭಟನೆ ನಡೆಸುತ್ತಿದ್ದು, ಮಂಡ್ಯ ನಗರದ ವಿ.ಸಿ.ಫಾರ್ಮ್ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿ ಟನ್ ಕಬ್ಬಿಗೆ 4,500 ರೂ. ನಿಗದಿ ಮಾಡಬೇಕು ಎಂದು ರೈತ ಸಂಘ ಮನವಿ ಮಾಡಿತ್ತು. ದಸರಾ ಹಬ್ಬದೊಳಗೆ ದರ ಘೋಷಣೆಗೆ ಸರ್ಕಾರಕ್ಕೆ ಗಡುವು ನೀಡಿತ್ತು. ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಹಸು, ಕುರಿ, ಎತ್ತಿನಗಾಡಿ, ಟ್ರ್ಯಾಕ್ಟರ್‌ಗಳೊಂದಿಗೆ ರಸ್ತೆಯಲ್ಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ವಿಶ್ವವಿಖ್ಯಾತ ಮೈಸೂರು ದಸರಾಗೆ ತೆರಳುತ್ತಿರುವವರಿಗೂ ಪ್ರತಿಭಟನೆ ಬಿಸಿ ತಟ್ಟಿದೆ.

ವಿ.ಸಿ.ಫಾರ್ಮ್ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಡಿವೈಎಸ್ಪಿ ಶಿವಮೂರ್ತಿ ನೇತೃತ್ವದಲ್ಲಿ ವಶಕ್ಕೆ ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದರೆ. ಸ್ಥಳದಲ್ಲಿದ್ದ ಇನ್ನಷ್ಟು ರೈತರ ಗುಂಪನ್ನು ಚದುರಿಸಿ ವಾಹನಗಳ ಸಂಚಾರ ಅನುವುಮಾಡಿಕೊಡಿತ್ತಿದ್ದಾರೆ. ಈ ವೇಳೆ ಆಕ್ರೋಶ ಹೊರ ಹಾಕಿದ ರೈತರು, ಸಂಬಳ ಪಡೆಯುವ ಅಧಿಕಾರಿಗಳು ಮತ್ತು ಲಂಚ ಪಡೆಯುವ ಜನಪ್ರತಿನಿಧಿಗಳಿಗೆ ರೈತರ ಕಷ್ಟ ಏನು ಗೊತ್ತಾಗುತ್ತೆ? ರೈತರ ಪರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಬೆಂಗಳೂರು ಮತ್ತು ಕುಣಿಗಲ್ ಕಡೆಯಿಂದ ಬರುವ ವಾಹನಗಳಿಗೆ ಸಂಪರ್ಕ ಕಲ್ಪಿಸುವ ವೃತ್ತದಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net