ಕೋಟ: ಯೋಗದ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಸಾಧ್ಯವಿದೆ. ಯೋಗದಿಂದ ಮಾನಸಿಕ ಮನೋಸ್ಥೈರ್ಯ ವೃದ್ಧಿಸುವುದಲ್ಲದೆ ದೈಹಿಕ ಬೆಳವಣಿಗೆಗೆ ಪೂರಕ ಎಂದು ಗೀತಾನಂದ ಫೌಂಡೇಷನ್ ಮಣೂರು ಪ್ರವರ್ತಕ ಆನಂದ ಸಿ.ಕುಂದರ್ ಹೇಳಿದರು.
ಕೋಟತಟ್ಟು ಶಾಲಾ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಪಂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬ್ರಹ್ಮಾವರ ವಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟತಟ್ಟು ಆಶ್ರಯದಲ್ಲಿ ಬ್ರಹ್ಮಾವರ ವಲಯ ಮಟ್ಟದ ಯೋಗಾಸನ ಸ್ಪರ್ಧೆ 2024-25 ಶನಿವಾರ ಉದ್ಘಾಟಿಸಿ ಮಾತನಾಡಿದರು.
ಎಸ್‌ಡಿಎಂಸಿ ಅಧ್ಯಕ್ಷ ಸುಲೇಮಾನ್ ಸಾಹೇಬ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ದೈಹಿಕ ಶಿಕ್ಷಣ ಶಿಕ್ಷಕ ಸಂಘ ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್, ಶಾಲಾ ಪ್ರಾಥಮಿಕ ಶಿಕ್ಷಕರ ಸಂಘದ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಪಂ ಸದಸ್ಯರಾದ ರವೀಂದ್ರ ತಿಂಗಳಾಯ, ವಿದ್ಯಾ ಸಾಲಿಯಾನ್, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಿವಮೂರ್ತಿ ಕೆ., ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಣ್ ಸುವರ್ಣ, ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಅರ್ಚನಾ ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್ ಆಚಾರ್ ನಿರೂಪಿಸಿ, ಮುಖ್ಯ ಶಿಕ್ಷಕಿ ಜಾನಕಿ ಭಟ್ ಸ್ವಾಗತಿಸಿದರು. ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಪದ್ಮಾವತಿ ಪ್ರಸ್ತಾವನೆ ಸಲ್ಲಿಸಿದರು. ಸಹಶಿಕ್ಷಕಿ ಸಂಗೀತ ಕೋಟ್ಯಾನ್ ವಂದಿಸಿದರು.