ಪೌರಾಡಳಿತ ಸಚಿವರಿಂದ ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ಭೇಟಿ

24 ckm 2
ಚಿಕ್ಕಮಗಳೂರಿನ ಇಂದಿಕಾ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿದ ಪೌರಾಡಳಿತ ಸಚಿವ ರಹೀಂ ಖಾನ್ ಅಲ್ಲಿಯೇ ಉಪಹಾರ ಸೇವಿಸಿದರು. ಶಾಸಕ ತಮ್ಮಯ್ಯ, ನಗರಸಭಾಧ್ಯಕ್ಷೆ ಸುಜಾತಾ ಶಿವಕುಮಾರ್, ಸಿಡಿಎ ಅಧ್ಯಕ್ಷ ನಯಾಜ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಗರದ ಕೆಎಸ್‌ಆರ್‌ಟಿಸಿ ಸಮೀಪದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟೀನ್‌ನ ಅಡುಗೆ ಮನೆ ಸೇರಿದಂತೆ ಎಲ್ಲೆಡೆಯೂ ಪರಿಶೀಲನೆ ನಡೆಸಿ ಸ್ವಚ್ಛತೆ ಕಾಪಾಡಿಕೊಂಡು ಉತ್ತಮ ಗುಣಮಟ್ಟದ ತಿಂಡಿ, ಊಟವನ್ನು ಸಾರ್ವಜನಿಕರಿಗೆ ನೀಡುವಂತೆ ಕ್ಯಾಂಟೀನ್ ಸಿಬ್ಬಂದಿಗೆ ಸೂಚನೆ ನೀಡಿದರು.

ಇಂದಿರಾ ಕ್ಯಾಂಟೀನ್‌ನಲ್ಲಿಯೇ ಉಪಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿದ ಸಚಿವರು, ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಾರದಂತೆ ಉತ್ತಮ ಗಣಮಟ್ಟದ ಸೇವೆ ನೀಡುವಂತೆ ತಾಕೀತು ಮಾಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಕೂಸು. ಹೀಗಾಗಿ ಇಂದು ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿz್ದೆÃನೆ. ಇಂದಿರಾ ಕ್ಯಾಂಟೀನ್‌ನಿAದ ಬಡವರು, ವಿದ್ಯಾರ್ಥಿಗಳು, ಕಾರ್ಮಿಕರು, ರೈತರಿಗೆ ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್, ಸಿಡಿಎ ಅಧ್ಯಕ್ಷ ನಯಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net