ಭಾರತೀಯ ಸಂಸ್ಕೃತಿಯ ಪ್ರತೀಕ

nandi
ಶಿರಾಳಕೊಪ್ಪ ಪಟ್ಟಣಕ್ಕೆ ಆಗಮಿಸಿದ ನಂದಿ ರಥಯಾತ್ರೆಯನ್ನು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಸ್ವಾಗತಿಸಿದರು. ಪವನ್,ಬಾಬಣ್ಣ ಇತರರಿದ್ದರು.
Published on

ಶಿರಾಳಕೊಪ್ಪ: ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ದೇಶೀಯ ತಳಿಗಳಲ್ಲಿ ಒಂದಾದ ನಂದಿಯನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ರಾಜ್ಯಾದ್ಯಂತ ನಂದಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಯಾತ್ರೆಯ ಪ್ರಧಾನ ಕಾರ್ಯದರ್ಶಿ ನವೀನ್ ಮೂರ್ಲ ಕೋಡ್ಮಣ್ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿರುವ ನಂದಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಗೋವಿನಂತೆ ನಂದಿಯೂ ದೈವ ಸ್ವರೂಪ ಎಂದರು.

ನಂದಿಗೆ ರಾಷ್ಟ್ರೀಯ ಮಾನ್ಯತೆ ದೊರಕಿಸಲು, ದೇಶೀಯ ಗೋಮಾತೆಯ ಮಹಿಮೆ ಜನರಿಗೆ ತಿಳಿಸಲು, ಮಣ್ಣು ಉಳಿಸುವ ನಂದಿ ಕೃಷಿಕರ ಸಂಖ್ಯೆ ಹೆಚ್ಚಿಸುವುದು ಸೇರಿ ವಿವಿಧ ಉದ್ದೇಶಗಳೊಂದಿಗೆ ಈ ಯಾತ್ರೆ ಮಾರ್ಚ್ ಕೊನೆಯವರೆಗೂ ರಾಜ್ಯಾದ್ಯಂತ ಸಂಚರಿಸಲಿದೆ. ಈ ಯಾತ್ರೆ ಮೂಡುಬಿದಿರೆಯಿಂದ ಆರಂಭವಾಗಿ ಉಡುಪಿ, ಕುಂದಾಪುರ, ಶಿವಮೊಗ್ಗ, ಶಿರಸಿ, ಬಾಗಲಕೋಟೆ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚರಿಸಿ ಮಾ.28ರಂದು ಮಂಗಳೂರಿನ ಕದ್ರಿಯಲ್ಲಿ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

ಪಟ್ಟಣಕ್ಕೆ ಆಗಮಿಸಿದ ರಥಯಾತ್ರೆಯನ್ನು ಹಿಂದು ಜಾಗರಣ ವೇದಿಕೆಯ ಪವನ್, ಬಾಬಣ್ಣ ಮತ್ತಿತರರು ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net