More

    ತಾಲೂಕು, ಜಿಲ್ಲಾ ಪಂಚಾಯಿತಿ ಎಲೆಕ್ಷನ್​ ನಡೆಯುತ್ತಾ? ಚುನಾವಣಾ ಆಯೋಗಕ್ಕೆ ಸರ್ಕಾರ ಬರೆದ ಪತ್ರದಲ್ಲೇನಿದೆ?

    ಬೆಂಗಳೂರು: ಕರೊನಾ ಛಾಯೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೂ ಬಿದ್ದಿದೆ. ಕೋವಿಡ್-19 ಉಪಟಳದಿಂದ ಇಡೀ ಜನಜೀವನ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಮುಂದೂಡಲು ಸರ್ಕಾರ ನಿರ್ಧರಿಸಿದೆ.

    2016-21ನೇ ಅವಧಿಯ ಜಿಲ್ಲಾ ಪಂಚಾಯಿತಿಗಳ ಅಧಿಕಾರಾವಧಿಯು ಏಪ್ರಿಲ್ 2021 ಮತ್ತು ಜೂನ್ 2021 ಹಾಗೂ ತಾಲೂಕು ಪಂಚಾಯಿತಿಗಳ ಅಧಿಕಾರಾವಧಿ ಮೇ 2021 ಹಾಗೂ ಆಗಸ್ಟ್ 2021ರ ಅಂತ್ಯದಲ್ಲಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಬೇಕಿತ್ತು. ಇದನ್ನೂ ಓದಿರಿ ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳು, ಅತ್ತೆಯ ತಲೆ ಒಡೆದು ಕೊಂದ! ತಡರಾತ್ರಿ ಮಲಗಿದ್ದಲ್ಲೇ ಹೆಣವಾದ ನಾಲ್ವರು

    ಆದರೆ, ರಾಜ್ಯದಲ್ಲಿ ಕರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಕಾರಣ ಸಾರ್ವಜನಿಕರು ಭಾಗವಹಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ಆರು ತಿಂಗಳು ಮುಂದೂಡುವ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆ ಸರ್ಕಾರದ ಪ್ರಧಾನ‌ ಕಾರ್ಯದರ್ಶಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

    ಅಲ್ಲದೆ, ರಾಜ್ಯದ ಯಾವುದೇ ನಗರ ಸ್ಥಳೀಯ ಸಂಸ್ಥೆಗಳು, ಸಹಕಾರ ಸಂಘಗಳು, ನೋಂದಾಯಿತ ಸೊಸೈಟಿಗಳು, ಸಂಘ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಳನ್ನು/ಉಪ ಚುನಾವಣೆಗಳನ್ನು ಹಾಗೂ ಈ ಸಂಸ್ಥೆಗಳ ಅಧ್ಯಕ್ಷ/ಉಪಾಧ್ಯಕ್ಷರ ಚುನಾವಣೆಯನ್ನೂ ಆರು ತಿಂಗಳು ಮುಂದೂಡುವಂತೆ ಕೋರಿದ್ದಾರೆ.

    ಈ ಸಂಬಂಧ ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ಮುಂದೂಡುವ ಕುರಿತು ಶೀಘ್ರದಲ್ಲೇ ನಿರ್ಣಯ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

    ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

    ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

    ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳು, ಅತ್ತೆಯ ತಲೆ ಒಡೆದು ಕೊಂದ! ತಡರಾತ್ರಿ ಮಲಗಿದ್ದಲ್ಲೇ ಹೆಣವಾದ ನಾಲ್ವರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts