ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

Table Tennis player Deenadayalan Vishwa
Published on

ಶಿಲ್ಲಾಂಗ್: ಭಾರತದ ಭರವಸೆಯ ಟೇಬಲ್ ಟೆನಿಸ್ ಆಟಗಾರ, ತಮಿಳುನಾಡಿನ ವಿಶ್ವ ದೀನದಯಾಳನ್(18) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶಿಲಾಂಗ್​ನಲ್ಲಿ ಸೋಮವಾರದಿಂದ ನಡೆಯಲಿರುವ 83ನೇ ಸೀನಿಯರ್ ರಾಷ್ಟ್ರೀಯ ಮತ್ತು ಅಂತರ ರಾಜ್ಯ ಟೇಬಲ್ ಟೆನ್ನಿಸ್‌​ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ತಂಡದ ಇತರ ಮೂವರು ಸಹ ಆಟಗಾರರೊಂದಿಗೆ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಕಾರಿನಲ್ಲಿ ಯುವ ಟೆನಿಸ್​ ಆಟಗಾರ ವಿಶ್ವ ದೀನದಯಾಳನ್​ ಪ್ರಯಾಣಿಸುತ್ತಿದ್ದರು. ಈ ವೇಳೆ ಭೀಕರ ಸಂಭವಿಸಿದ ಭೀಕರ ಅಪಘಾತದಲ್ಲಿ ವಿಶ್ವ ದೀನದಯಾಳನ್ ಕೊನೆಯುಸಿರೆಳೆದಿದ್ದಾರೆ.

ಟ್ರಾಕ್ಸಿಯಲ್ಲಿ ವಿಶ್ವ ದೀನದಯಾಳನ್ ಮತ್ತು ಅವರ ತಂಡ ಪ್ರಯಾಣಿಸುತ್ತಿತ್ತು. ಮಾರ್ಗಮಧ್ಯೆ ಮೇಘಾಲಯದ ರಿ-ಭೋಯ್ ಎಂಬಲ್ಲಿ ಎದುರು ದಿಕ್ಕಿನಿಂದ ಬಂದ ವಾಹನವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಟ್ಯಾಕ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟ್ಯಾಕ್ಸಿ ನಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಗಂಭೀರ ಗಾಯಗೊಂಡಿದ್ದ ವಿಶ್ವ ದೀನದಯಾಳನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಬದುಕಲಿಲ್ಲ.

ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್‌ಐ) ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ದೀನದಯಾಳನ್ ಸಾವನ್ನಪ್ಪಿದ್ದಾನೆ ಎಂದು ನಾಂಗ್‌ಪೋಹ್ ಸಿವಿಲ್ ಆಸ್ಪತ್ರೆಯ ವೈದ್ಯರು ಘೋಷಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net