More

    ಶಿಕ್ಷಕ ವೃತ್ತಿ ಪಾವಿತ್ರೃ ಕಾಪಾಡಿಕೊಳ್ಳಬೇಕು

    ಸಿಂಧನೂರು: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮನುಷ್ಯ ಯಾವುದೇ ಕ್ಷೇತ್ರದಲ್ಲಿ ಸಾಧನೆ ಕಂಡುಕೊಳ್ಳುವಲ್ಲಿ ಶಿಕ್ಷಕರ ಮಾರ್ಗದರ್ಶನ ಅಗತ್ಯ ಎಂದು ಮಾಜಿ ಶಾಸಕ ವೆಂಕಟರಾವ ನಾಡಗೌಡ ಹೇಳಿದರು.

    ಇದನ್ನೂ ಓದಿ: ಶಿಕ್ಷಕರಿಂದ ಕನ್ನಡ ಸಾಹಿತ್ಯದ ಸುಗಂಧ ಪಸರಿಸಲಿ

    ನಗರದ ಶ್ರೀ ಕನಕದಾಸ ಕಲ್ಯಾಣ ಮಂಟಪದಲ್ಲಿ ಶನಿವಾರ ಸಂಜೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

    ಸರ್ಕಾರಿ ಶಾಲೆಗಳ ಬೆಳವಣಿಗೆ ಶಿಕ್ಷಕರ ಕೈಯಲ್ಲಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದರೂ, ಶೈಕ್ಷಣಿಕ ಗುಣಮಟ್ಟ ಸುಧಾರಿಸುತ್ತಿಲ್ಲ. ಸಮಾಜದ ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಮಹತ್ವದ್ದಾಗಿದ್ದು ಶಿಕ್ಷಕರು ಜವಬ್ದಾರಿಯಿಂದ ಸೇವೆ ಮಾಡಬೇಕೆಂದರು.

    ಮೈಸೂರು ವಿದ್ಯಾವಾಹಿನಿ ಸಂಸ್ಥಾಪಕ ನಿತ್ಯಾನಂದ ವಿವೇಕವಂಶಿ ಮಾತನಾಡಿ, ಶಿಕ್ಷಕರಿಗೆ ಅದ್ವಿತೀಯ ಶಿಕ್ಷಿ ಇರುತ್ತದೆ. ಅದನ್ನು ತಿಳಿದುಕೊಳ್ಳದೆ ಕೀಳಿರಿಮೆಯಿಂದ ಹಿನ್ನೆಡೆ ಅನುಭವಿಸುತ್ತಿದ್ದಾರೆ.

    ಆದ್ದರಿಂದ ತಾನೊಬ್ಬ ಗುರುವೆಂದು ಭಾವಿಸಿ ತನ್ನ ಶಕ್ತಿಯನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕೆಂದು ತಿಳಿಸಿದರು. ಕನಕದಾಸ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಎಂ.ದೊಡ್ಡಬಸವರಾಜ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts