More

    ಹೋಮ್ ವರ್ಕ್ ಮಾಡಲಿಲ್ಲ ಎಂದು ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಶಿಕ್ಷಕಿ

    ಬೆಂಗಳೂರು: ಹೋಮ್ ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ೭ನೇ ತರಗತಿ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
    ಹುಳಿಮಾವಿನ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
    ಹುಳಿಮಾವು ಬಿಜಿ ರಸ್ತೆಯಲ್ಲಿರುವ ಖಾಸಗಿ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್ ಗಾಯಗೊಂಡವ. ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.
    ಬುಧವಾರ ಮಹಮ್ಮದ್ ಫರ್ದೀನ್ ಹೋಂ ವರ್ಕ್ ಮಾಡಿಕೊಂಡು ಬಂದಿರಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯು ರಾಡ್‌ನಿಂದ ಆತನ ಕೈಗೆ ರಕ್ತ ಬರುವಂತೆ ಹೊಡೆದಿದ್ದಾರೆ. ವಿದ್ಯಾರ್ಥಿಯು ಗಾಯಗೊಂಡು ಕಿರುಚಾಡಿದ್ದಾನೆ. ಮನೆಗೆ ಬಂದು ಪಾಲಕರ ಬಳಿ ಹೇಳಿದಾಗ ಅವರು ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಶಾಲಾ ಆಡಳಿತ ಮಂಡಳಿಯಿಂದ ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸ್ ಹುಳಿಮಾವು ಪೊಲೀಸರು ತಿಳಿಸಿದ್ದಾರೆ.
    ದೂರು ಬಂದಿದೆ, ಪರಿಶೀಲಿಸಿ ಕ್ರಮ:
    ಶಾಲೆಯೊಂದರ ಶಿಕ್ಷಕಿ ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಬಗ್ಗೆ ದೂರು ಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗುರುವಾರ ಮಾಹಿತಿ ಬಂದಿದೆ. ವಿಚಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿಸಲಾಗಿದೆ. ಶಾಲೆಗೆ ನೋಟಿಸ್ ಕೊಡಲಾಗುವುದು. ಶಾಲೆಯಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts